ಮಂಡ್ಯ:ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಉದ್ಘಾಟನೆಯಾದ ಕೆಲವೇ ತಿಂಗಳುಗಳಲ್ಲಿ ಅಪಘಾತದಿಂದ ಮೃತಪಟ್ಟವರ ಸಂಖ್ಯೆ 100 ದಾಟಿದ್ದು, ಸಾವಿನ ಸರಣಿ ಮುಂದುವರಿದಿದೆ. ಇದೀಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ದಾರುಣ ಅಂತ್ಯವಾಗಿದ್ದಾರೆ. ಈ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಫ್ಲೈಓವರ್ ಮೇಲೆ ನಡೆದಿದೆ.
ಇದನ್ನೂ ಓದಿ:ವಾಗ್ನರ್​ ಪಡೆ ಬಂಡಾಯ ಶಮನ: ರಷ್ಯಾದಲ್ಲಿ ತಗ್ಗಿದ ಆಂತರಿಕ ಯುದ್ಧದ ಭೀತಿ, ಪ್ರಿಗೊಜಿನ್​ ಹಿಂದೆ ಸರಿದಿದ್ದೇಕೆ?
ಮೃತರನ್ನು ಮಣಿ (25) ಮತ್ತು ಜನಾರ್ಧನ ಪೂಜಾರಿ (21) ಎಂದು ಗುರುತಿಸಲಾಗಿದೆ. ಇಬ್ಬರು ಕೋಲಾರ ಹಾಗೂ ಕೊಪ್ಪಳ ಮೂಲದವರು. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ವೀಕೆಂಡ್​ ರಜೆ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ಇಂದು ಬೆಳಗ್ಗಿನ ಜಾವ ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಪ್ರಧಾನಿ ಮೋದಿ ಫೋಟೋ ಶೇರ್​ ಮಾಡಿದ ಜಾನ್​ ಸೇನಾ! ಯು ಕಾಂಟ್​ ಸೀ ಮಿ ನೆನಪಿಸಿಕೊಂಡ ನೆಟ್ಟಿಗರು ​

ಆಸ್ಪತ್ರೆಯ ಐಸಿಯುನಲ್ಲೇ ಡಾನ್ಸ್​: ಬಾಲಕನ ಸಕಾರಾತ್ಮಕ ಮನೋಭಾವಕ್ಕೆ ನೆಟ್ಟಿಗರು ಫಿದಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 15 =
Remember me
