ಬೆಂಗಳೂರುಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೆ ಸಾಲಿನಲ್ಲಿ ಕೆಎಎಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ.
ರಾಜ್ಯ ಸರ್ಕಾರವು 2023-24ನೇ ಸಾಲಿನ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಸಲಾಗಿದೆ. ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆತಿದ್ದು, ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಹಿನ್ನೆಲೆಯಲ್ಲಿ 2017-18ರಲ್ಲಿ ಕೆಎಎಸ್ ಬರೆದಿದ್ದ ಎಲ್ಲರಿಗೂ ವಯಸ್ಸಿನ ನಿರ್ಬಂಧವಿಲ್ಲದೆ ಅನುಮತಿ ನೀಡಲಾಗಿದೆ.
ಇಂತಹ ಅಭ್ಯರ್ಥಿಗಳೂ ನೇಮಕಾತಿಗೆ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ಆದೇಶಕ್ಕೆ ಸಚಿವ ಸಂಪುಟದ ಘಟನೋತ್ತರ ಮಂಜೂರಾತಿ ಪಡೆಯುವ ಷರತ್ತಿಗೆ ಒಳಪಟ್ಟಿರುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 8 =
Remember me
