ದಾವಣಗೆರೆ:ಕರೊನಾ ವೈರಸ್​ ದಿನದಿಂದ ದಿನಕ್ಕೆ ಒಂದಲ್ಲ ಒಂದು ಜಿಲ್ಲೆಗೆ ಹರಡುತ್ತಿದೆ. ಈಗೆರಡು ದಿನಗಳ ಹಿಂದೆ ಚಿತ್ರದುರ್ಗದ ಮಹಿಳೆಯೋರ್ವರಲ್ಲಿ ಕರೊನಾ ಸೋಂಕು ದೃಢಪಟ್ಟಿತ್ತು. ಈಗ ದಾವಣಗೆರೆಗೂ ಮಹಾಮಾರಿ ಕಾಲಿಟ್ಟಿದೆ.
ದಾವಣಗೆರೆಯ ಸಿದ್ದವೀರಪ್ಪ ಲೇಔಟ್​ ನಿವಾಸಿಯೋರ್ವರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದ್ದಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಇವರು ಫ್ರಾನ್ಸ್​​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಅಲ್ಲಿಂದ ಮರಳಿದ್ದ ಅವರಿಗೆ ಹೋಂ ಕ್ವಾರೆಂಟೈನ್​ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಆದರೆ ಅದನ್ನು ಸರಿಯಾಗಿ ಪಾಲನೆ ಮಾಡಿರಲಿಲ್ಲ. ಮಾ.25ರಂದು ಅವರ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಸದ್ಯ ವರದಿ ಬಂದಿದ್ದು, ಕರೋನಾ ಇರುವುದು ದೃಢಪಟ್ಟಿದೆ.
ವ್ಯಕ್ತಿಯನ್ನು ಐಸೋಲೇಶನ್​ ವಾರ್ಡ್​ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಹಾಗೇ ಅವರ ಸಂಪರ್ಕಕ್ಕೆ ಬಂದಿದ್ದ 18 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ. ಆ ವ್ಯಕ್ತಿಯ ತಂದೆ-ತಾಯಿ, ತಂಗಿ, ವೈದ್ಯರು, ನರ್ಸ್​ ಮತ್ತಿತರರನ್ನೂ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕರೊನಾ ಸೋಂಕಿಗೆ ತುತ್ತಾಗಿ ಬಲಿಯಾದ ಶಿರಾದ ವ್ಯಕ್ತಿಯ ಮೂವರು ಪತ್ನಿಯರು, 16 ಮಕ್ಕಳ ಮೇಲೆ ತೀವ್ರ ನಿಗಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 9 =
Remember me
