ಮೈಸೂರು:ಭಾರತ ಲಾಕ್​ಡೌನ್​ ಆಗಿದೆ. ಆದರೂ ಜನರು ಅದನ್ನು ಗಂಭೀರವಾಗಿ ಪರಿಗಣಿಸದೆ, ಅಗತ್ಯ ವಸ್ತುಗಳ ಖರೀದಿ, ಓಡಾಟದಲ್ಲಿ ತೊಡಗಿಕೊಂಡಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರೂ ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಕರ್ನಾಟಕದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ.
ಇಂದು ಒಂದೇ ದಿನದಲ್ಲಿ ಕರ್ನಾಟಕದಲ್ಲಿ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೈಸೂರಿನಲ್ಲಿ ಓರ್ವ ವ್ಯಕ್ತಿಯಲ್ಲಿ ಕರೊನಾ ಪಾಸಿಟಿವ್​ ದೃಢಪಟ್ಟಿದೆ. ಹಾಗೇ ಬೆಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್​ ಕೆಲಸ ಮಾಡುತ್ತಿದ್ದವರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಮೈಸೂರಿನಲ್ಲಿ ಕರೊನಾ ಸೋಂಕು ಕಾಣಿಸಿಕೊಂಡ ವ್ಯಕ್ತಿ ಔಷಧಿ ತಯಾರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ವೈದ್ಯಕೀಯ ವಲಯದ ಹಲವರೊಂದಿಗೆ ಸಂಪರ್ಕ ಹೊಂದಿದ್ದ. ಈಗ ಈತನ ಸಂಪರ್ಕಕ್ಕೆ ಬಂದಿದ್ದ ಏಳು ಜನರನ್ನು ಜಿಲ್ಲಾಡಳಿತ ಗುರುತಿಸಿದೆ. ಅವರನ್ನು ಹೋಂ ಕ್ವಾರೆಂಟೈನ್​ನಲ್ಲಿಟ್ಟು ನಿಗಾ ಇಡಲಾಗಿದೆ. ಕರೊನಾ ಪೀಡಿತ ವ್ಯಕ್ತಿಯನ್ನು ಮೈಸೂರಿನ ಐಸೋಲೇಶನ್​ ವಾರ್ಡ್​​ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಗೇ ಬೆಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್​ ಕೆಲಸ ಮಾಡುತ್ತಿದ್ದ ಆಂಧ್ರ ವ್ಯಕ್ತಿ, ಕರೊನಾ ಪೀಡಿತರೋರ್ವರ ಸಂಪರ್ಕಕ್ಕೆ ಬಂದಿದ್ದ ಎನ್ನಲಾಗಿದೆ. ಅಲ್ಲಿಗೆ, ಕರ್ನಾಟಕದಲ್ಲಿ ಕರೊನಾ ಸೋಂಕಿತರ ಸಂಖ್ಯೆ 55ಕ್ಕೆ ಏರಿದೆ.
1.70 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್​ ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seven + 4 =
Remember me
