ಮಂಗಳೂರು:ಕರೊನಾ ವೈರಸ್​​ನಿಂದ ಮಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಈ ವ್ಯಕ್ತಿ ವೆನ್ಲಾಕ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಡೆಡ್ಲಿ ಕೋವಿಡ್​-19ನಿಂದ ತುಮಕೂರಿನಲ್ಲಿ ವೃದ್ಧೆ ಸಾವು; ರಾಜ್ಯದಲ್ಲಿ 43ಕ್ಕೇರಿದ ಮೃತರ ಸಂಖ್ಯೆ
40 ವರ್ಷ ವಯಸ್ಸಿನ ಇವರು ವೇಣೂರಿನಲ್ಲಿ ಸಿಮೆಂಟ್ ಅಂಗಡಿಯ ಗೂಡ್ಸ್​ ರಿಕ್ಷಾ ಚಾಲಕರಾಗಿದ್ದರು. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯಲು ಶನಿವಾರ ರಾತ್ರಿ ವೆನ್ಲಾಕ್​ ಆಸ್ಪತ್ರೆಗೆ ಆಗಮಿಸಿದ್ದರು. ಅಂದೇ ರಾತ್ರಿ ಮೃತಪಟ್ಟಿದ್ದರು.
ಇವರ ಸಾವಿನ ಬಳಿಕ ಮೃತದೇಹಕ್ಕೆ ಕರೊನಾ ಟೆಸ್ಟ್ ಮಾಡಲಾಗಿತ್ತು. ಅದರ ವರದಿಯೀಗ ಬಂದಿದ್ದು, ಕೊವಿಡ್​-19 ಪಾಸಿಟಿವ್​ ಆಗಿದೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.  ಕರೊನಾಕ್ಕೆ ಮಂಗಳೂರಿನಲ್ಲಿಯೇ ಆರು ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 44ಕ್ಕೆ ಏರಿದೆ.
ಇದನ್ನೂ ಓದಿ:ಸೋಂಕಿಗೆ ಸೆನ್ಸ್ ಮಾಸ್ಕ್ ಶಾಕ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
