ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿಗೆ ಮತ್ತೊಂದು ಸಾವಾಗಿದೆ. ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೋರ್ವ ಮಾರಕ ವೈರಸ್​ನಿಂದ ಮೃತಪಟ್ಟಿದ್ದಾರೆ. ಅಲ್ಲಿಗೆ ಕರ್ನಾಟದಲ್ಲಿ ಕೊವಿಡ್​ ಸಾವಿನ ಸಂಖ್ಯೆ 11ಕ್ಕೆ ಏರಿದೆ.
ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಟ್ವೀಟ್​ ಮಾಡಿ, ಕರೊನಾ ದಿಂದ ಮತ್ತೊಂದು ಸಾವಾಗಿದ್ದನ್ನು ದೃಢಪಡಿಸಿದ್ದಾರೆ.
ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೋರ್ವರು ಕೋವಿಡ್​-19ರಿಂದ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳಂತೆ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಸಾರ್ವಜನಿಕರು ದಯವಿಟ್ಟು ಮನೆಯಲ್ಲಿಯೇ, ಸುರಕ್ಷಿತವಾಗಿ ಇರಿ ಎಂದು ಮನವಿ ಮಾಡಿದ್ದಾರೆ.
ಈ ವೃದ್ಧ ವಿದೇಶಕ್ಕೆ ಹೋಗಿಬಂದವರಲ್ಲ. ಹಾಗೇ ಕರೊನಾ ಸೋಂಕಿತರ ಸಂಪರ್ಕಕ್ಕೆ ಹೋಗಿದ್ದು ಹೇಗೆ ಎಂಬುದು ಗೊತ್ತಾಗಿಲ್ಲ. ಅಸ್ತಮಾದಿಂದ ಬಳಲುತ್ತಿದ್ದ ಇವರನ್ನು ಏಪ್ರಿಲ್​ 8ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರೊನಾ ಸೋಂಕು ಇರುವುದು ನಿನ್ನೆ ದೃಢಪಟ್ಟಿತ್ತು.
ಸ್ವಲ್ಪದಿನಗಳ ಹಿಂದೆ ಗೌರಿಬಿದನೂರಿನ 70ವರ್ಷದ ವೃದ್ಧೆ ಕರೊನಾಕ್ಕೆ ಬಲಿಯಾಗಿದ್ದರು. ಸದ್ಯ ಚಿಕ್ಕಬಳ್ಳಾಪುರದ ಒಟ್ಟು ನಾಲ್ಕುವಾರ್ಡ್​ಗಳನ್ನು ಸಂಪೂರ್ಣ ಸೀಲ್​ಡೌನ್​ ಮಾಡಲಾಗಿದೆ.
ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು#COVID19ಸೋಂಕಿನಿಂದ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ‌ ಇಡಲಾಗಿದ್ದು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಅಂತ್ಯಕ್ರಿಯೆಗೆ ಇಲಾಖೆಯು ಸಿದ್ಧತೆ ನಡೆಸುತ್ತಿದೆ. ದಯಮಾಡಿ ಸಾರ್ವಜನಿಕರು ಮನೆಯಲ್ಲೇ ಸುರಕ್ಷಿತವಾಗಿರಬೇಕು ಎಂದು ವಿನಂತಿಸುತ್ತೇನೆ
— B Sriramulu (@sriramulubjp)April 15, 2020

ಲಾಕ್​ಡೌನ್​ ಮೇ 3ರವರೆಗೆ ವಿಸ್ತರಣೆ: ಆತಂಕ ಪಡುವ ಅಗತ್ಯವಿಲ್ಲ..ಕೇಂದ್ರ ಸರ್ಕಾರದ ಈ ಮಾರ್ಗಸೂಚಿಯನ್ನೊಮ್ಮೆ ಓದಿಬಿಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
