ಬೆಂಗಳೂರು:ಬೆಂಗಳೂರಿನ ಸಿಲ್ಕ್‌ಬೋರ್ಡ್‌ ಸಮೀಪದ ಮಡಿವಾಳ ಫ್ಲೈಓವರ್ ಮೇಲೆ ಬುಧವಾರ ಸಂಜೆ ಬಿಎಂಟಿಸಿಗೆ ಗೃಹಿಣಿಯೊಬ್ಬರು ಬಲಿಯಾದ ಘಟನೆ ನಡೆದಿದೆ.
ಸೀಮಾ ಮೃತ ಗೃಹಿಣಿ. ನಿನ್ನೆ ಸಂಜೆ 6.30ರ ಸುಮಾರಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ ಘಟನೆ ನಡೆದಿದೆ. BMTC ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಅಪಘಾತದ ಬಳಿಕ ಬಸ್ ಬಿಟ್ಟು ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ.
ನಡೆದಿದ್ದೇನು?:ಕಳೆದ ಎರಡೂವರೆ ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿ ಸಿಂಗಸಂಧ್ರದಲ್ಲಿ ವಾಸವಾಗಿದ್ದರು. ಮೂಲತಃ ವಿಜಯನಗರ ಜಿಲ್ಲೆ, ಗುಡೇಕೋಟೆ ಕೂಡ್ಲಿಗಿಯ ಶ್ರೀಕಂಠಪುರ ತಾಂಡದ ನಿವಾಸಿಗಳಾದ ದಂಪತಿ ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು. ನಿನ್ನೆ ಸಂಜೆ  6:30ರ ವೇಳೆಗೆ ಪ್ರೋ ಕಬಡಿ ಪಂದ್ಯ ವೀಕ್ಷಿಸಲು ತಮ್ಮ ಪುಟ್ಟ ಮಗುವಿನ ಜತೆ ಬೈಕ್​ನಲ್ಲಿ ಹೋಗುವಾಗ ಬಸ್​ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ.
ಈ ಪರಿಣಾಮ ಮೂವರು ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಗೃಹಿಣಿ ಸಾವನ್ನಪ್ಪಿದರೆ ಒಂದೂವರೆ ವರ್ಷದ ಮಗು ಗಾನವಿ ಹಾಗೂ ಆಕೆಯ ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ಸೀಮಾ(21) ಹೆಲ್ಮೆಟ್ ಧರಿಸಿದ್ದರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಘಟನೆ ಬಳಿಕ ಚಾಲಕ ಮತ್ತು ನಿರ್ವಾಹಕ ಬಸ್ ಬಿಟ್ಟು ಪರಾರಿಯಾಗಿದ್ದಾರೆ.
ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತ ಗೃಹಿಣಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Gold, Silver Price; ಗಗನಕ್ಕೇರಿದ್ದ ಚಿನ್ನದ ಬೆಲೆ..ಈಗ ಎಷ್ಟಿದೆ ನೋಡಿ 10 ಗ್ರಾಂ ಚಿನ್ನದ ದರ



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − seven =
Remember me
