ರಾಮನಗರ:ಜಿಲ್ಲೆಯಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ತಮ್ಮ ಜಮೀನಿಗೆ ಕೆಲಸಕ್ಕೆ ತೆರಳುತ್ತಿದ್ದ ಸಹೋದರಿಯರಿಬ್ಬರ ಮೇಲೆ ಆನೆ ದಾಳಿ ನಡೆಸಿದ್ದು, ಓರ್ವ ಮಹಿಳೆ ಮೃತಪಟ್ಟು, ಮತ್ತೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕನಕಪುರ ತಾಲೂಕಿನ ಅಚ್ಚಲು ಗ್ರಾಮದ ಇಂದಿರಾನಗರ ಬಳಿ ಕಾಡಾನೆ ದಾಳಿ ನಡೆಸಿದ್ದು, ಜಯಮ್ಮ (50)ಮೃತಪಟ್ಟ ಮಹಿಳೆ, ಇವರ ಸಹೋದರಿ ವೆಂಕಟಲಕ್ಷ್ಮಮ್ಮ (45) ತೀವ್ರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಅಪಘಾತದಲ್ಲಿ ಮೃತನಾಗಿದ್ದ ಯುವಕನ ಅಂಗಾಂಗ ದಾನ: ಮಾನವೀಯತೆ ಮೆರೆದ ಚಿಕ್ಕಮಂಡ್ಯ ಗ್ರಾಮದ ಕುಟುಂಬ
ಸೋಮವಾರ ಮುಂಜಾನೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಇಬ್ಬರೂ ಸಹೋದರಿಯರು ತಮ್ಮ ಜಮೀನಿಗೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಆನೆ ದಾಳಿ ನಡೆಸಿದ್ದು, ಜಯಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಸಹೋದರಿಯನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.
ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ನಡೆದ ಮೂರನೇ ಆನೆ ದಾಳಿ ಪ್ರಕರಣವಾಗಿದೆ. ಈಗಾಗಲೇ ಎರಡು ಆನೆಗಳನ್ನು ಸೆರೆ ಹಿಡಿಯಲಾಗಿದೆಯಾಗಿದ್ದರೂ ಮತ್ತೊಂದು ಘಟನೆ ನಡೆದಿರುವುದು ಆತಂಕವನ್ನು ಹೆಚ್ಚಿಸಿದೆ.
ರಾಜ್ಯದಲ್ಲಿ ಮಳೆ ಕೊರತೆ: ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ಎಂದು ವಿಜಯೇಂದ್ರ ಟ್ವೀಟ್​

ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 1 ವಾರದಲ್ಲಿ ಪ್ರಯಾಣಿಸಿದ ಮಹಿಳೆಯರೆಷ್ಟು? ಖರ್ಚಾಗಿದ್ದೆಷ್ಟು? ಇಲ್ಲಿದೆ ಮಾಹಿತಿ

ಸಲುಗೆ ಬೆಳೆಸಿ ಕೋಟಿ ಲೂಟಿ! ಅರಕಲಗೂಡು SBI ಗುತ್ತಿಗೆ ನೌಕರನ ನಕಲಿ ಚಿನ್ನದ ಮುಖವಾಡ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one − 1 =
Remember me
