ಉತ್ತರಕನ್ನಡ:ಮೂರು ದಿನಗಳ ಹಿಂದೆ ಮದುವೆ ದಿಬ್ಬಣದ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದು ಒಟ್ಟು ಹತ್ತು ಜನರು ಸಾವಿಗೀಡಾಗಿದ್ದು, ಇನ್ನೂ ಕೆಲವರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ರಾಜ್ಯದಲ್ಲಿ ಮತ್ತೊಂದು ಮದುವೆ ದಿಬ್ಬಣದ ವಾಹನವೊಂದು ಅಪಘಾತಕ್ಕೀಡಾಗಿದೆ.
ಉತ್ತರಕನ್ನಡ ಜಿಲ್ಲೆಯ ಕುಮಟಾದ ಬಾಡ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣ ಹೊರಟಿದ್ದ ಟೆಂಪೊ ಪಲ್ಟಿಯಾಗಿದ್ದು, ಇದರಲ್ಲಿದ್ದ 20ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮದುವೆ ದಿಬ್ಬಣದ ಈ ಟೆಂಪೊ ಕುಮಟಾದಿಂದ ಅಘನಾಶಿನಿ ಕಡೆ ತೆರಳುತಿತ್ತು. ಅತಿವೇಗದಿಂದಾಗಿ ಟೆಂಪೋ ಪಲ್ಟಿಯಾಗಿದೆ ಎನ್ನಲಾಗಿದ್ದು, ಗಾಯಾಳುಗಳಿಗೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭಿರವಾಗಿ ಗಾಯಗೊಂಡವರನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಮಟಾ-ಹೊನ್ನಾವರ ಶಾಸಕ ಕೆ.ದಿನಕರ ಶೆಟ್ಟಿ ಗಾಯಾಳುಗಳನ್ನು ಭೇಟಿಯಾಗಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಕುಮಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಕ್ರೂಸರ್ ಅಪಘಾತ ಪ್ರಕರಣ; ಸತ್ತವರ ಸಂಖ್ಯೆ 10ಕ್ಕೆ ಏರಿಕೆ..

ಶಾಲೆಯಿಂದ ಮನೆಗೆ ಹೊರಟಿದ್ದ ಮಕ್ಕಳಿಗೆ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + five =
Remember me
