ಹಾಸನ:ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಪರಿಣಾಮ ಬೆಂಗಳೂರು ಮತ್ತು ಮಂಗಳೂರಿನ ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುವ ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತವಾದ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಲಾಗಿದೆ.
ಇದನ್ನೂ ಓದಿ:ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಲಾಗಿತ್ತು ಎಂಬ ಅಮಿತ್ ಷಾ ಹೇಳಿಕೆಗೆ ಕೇರಳ ಸಿಎಂ ತಿರುಗೇಟು
ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ದೊಡ್ಡತಪ್ಪಲು ಸಮೀಪ ಮತ್ತೆ ಭೂ ಕುಸಿತ ಉಂಟಾಗಿ ಒಂದು ಟ್ಯಾಂಕ್ ಕೆಸರಿನಲ್ಲಿ ಸಿಲುಕಿದ್ದು ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ಈ ಮಣ್ಣಿನಲ್ಲಿ ಹಲವು ವಾಹನಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭಾರೀ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್​ ಹೆದ್ದಾರಿ 75ನ್ನು ಬಂದ್ ಮಾಡಲಾಗಿದೆ.
ಚಿಕ್ಕಮಗಳೂರಿನಲ್ಲೂ ಸಾಲು ಸಾಲು ಗುಡ್ಡ ಕುಸಿತು: ಚಿಕ್ಕಮಗಳೂರಿನಲ್ಲೂ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಶೃಂಗೇರಿ ತಾಲೂಕಿನ ಆನೆಗುಂದಿ ಬಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಗುಡ್ಡ ಕುಸಿತಗಳಾಗಿವೆ. ಆನೆಗುಂದಿ ಬಳಿ 4 ಮನೆಗಳ ಮೇಲೂ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಶಿವಮೊಗ್ಗ-ಶೃಂಗೇರಿ-ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಪಾಯಕಾರಿ ರಸ್ತೆಯಲ್ಲೇ ವಾಹನಗಳು ಸಂಚಾರ ಮಾಡುತ್ತಿವೆ.
ಪ್ರವಾಸಿ ತಾಣಗಳಲ್ಲಿ ಗುಡ್ಡ, ರಸ್ತೆಗಳ ಕುಸಿತ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಡಳಿತ ಕೂಡ ಆಗಸ್ಟ್ 15ರವರೆಗೆ ಪ್ರವಾಸಕ್ಕೆ ಬಾರದಂತೆ ಪ್ರವಾಸಿಗರಿಗೆ ಮನವಿ ಮಾಡಿದೆ. ಜಿಲ್ಲೆಯಾದ್ಯಂತ ಚಾರಣ ಬ್ಯಾನ್ ಮಾಡಿ ಡಿಸಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ವಯನಾಡು ಭೂಕುಸಿತ ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × four =
Remember me
