ದಾವಣಗೆರೆ:ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ‘ಈ ಸಲ ಚುನಾವಣೆಗೆ ಸ್ಪರ್ಧಿಸುವುದಿಲ್ಲ’ ಎಂದು ನಿನ್ನೆಯಷ್ಟೇ ಹೇಳಿದ್ದು, ಇದೀಗ ಭಾರತೀಯ ಜನತಾ ಪಕ್ಷದ ಇನ್ನೊಬ್ಬ ಶಾಸಕ ಕೂಡ ‘ಈ ಚುನಾವಣೆಗೆ ಸ್ಪರ್ಧಿಸುವುದಿಲ್ಲ’ ಎಂದಿದ್ದಾರೆ. ಈ ಮೂಲಕ ಬಿಜೆಪಿಯ ಇಬ್ಬರು ಶಾಸಕರು ಶಸ್ತ್ರತ್ಯಾಗ ಮಾಡಿದಂತಾಗಿದೆ.
ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್​.ಎ.ರವೀಂದ್ರನಾಥ್ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತಮ್ಮ ನಿಲುವು ತಿಳಿಸಿದ್ದಾರೆ. ಅರ್ಥಾತ್, ಈ ಸಲದ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂಬುದಾಗಿ ಅವರು ಹೇಳಿದ್ದಾರೆ. ಅನಾರೋಗ್ಯದ ಕಾರಣ ತಾವು ಸ್ಪರ್ಧಿಸುತ್ತಿಲ್ಲ ಎಂಬುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಕ್ಷಣಮಾತ್ರದಲ್ಲಿ ಪತ್ನಿಯ ಕಣ್ಣೆದುರೇ ಸಾವಿಗೀಡಾದ ಪತಿ; ಪತ್ನಿಗೆ ಗಂಭೀರ ಗಾಯ
ರವೀಂದ್ರನಾಥ್ ಹೇಳಿಕೆ ಬೆನ್ನಲ್ಲೇ ದಾವಣಗೆರೆಯ ಶಿರಮಗೊಂಡನಹಳ್ಳಿ ಬಳಿ ಇರುವ ಅವರ ಮನೆ ಮುಂದೆ ನೂರಾರು ಅಭಿಮಾನಿಗಳು ಜಮಾಯಿಸಿದ್ದು, ಈ ಬಾರಿ ಚುನಾವಣೆಗೆ ನಿಲ್ಲುವಂತೆ ಒತ್ತಾಯಿಸಲಾರಂಭಿಸಿದ್ದಾರೆ. ತಾವು ನಿಂತರೆ ತಮ್ಮನ್ನು ಭಾರಿ ಅಂತರದಿಂದ ಗೆಲ್ಲಿಸಿಕೊಂಡು ಬರುವುದಾಗಿ ಕೆಲ ಮಹಾನಗರ ಪಾಲಿಕೆ ಸದಸ್ಯರು, ಕಾರ್ಯಕರ್ತರು ಒತ್ತಡ ಹೇರಿದ್ದಾರೆ. ಆದರೆ ಅನಾರೋಗ್ಯ ಕಾರಣದಿಂದ ನಾನು ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂಬುದಾಗಿ ರವೀಂದ್ರನಾಥ್ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಮನ ‘ಮುಟ್ಟು’ವ ಕಾರ್ಯ: ಮನೆಯೊಡತಿ ಮುಟ್ಟಾದಾಗ ರಾಣಿಯಂತೆ ನೋಡಿಕೊಳ್ಳುತ್ತಿರುವ ಗಂಡ-ಗಂಡುಮಕ್ಕಳು!

ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 12 =
Remember me
