ಬೀದರ್:ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​ ಮಧ್ಯೆ ಸಂಘರ್ಷ ಮುಂದುವರಿದಿದ್ದು, ಇದರ ನಡುವೆ ಸಿಎಂ ರೇಸ್​ನಲ್ಲಿ ಇನ್ನೊಂದು ಹೆಸರು ಕೇಳಿಬರುತ್ತಿದೆ.
ರಾಜ್ಯದಲ್ಲಿ 39 ಜನ ಲಿಂಗಾಯತ ಶಾಸಕರು ಆಯ್ಕೆಯಾಗಿದ್ದು, ಲಿಂಗಾಯತರಿಗೆ ಸಿಎಂ ಸ್ಥಾನ ನೀಡಬೇಕೆಂದು ಕಲ್ಯಾಣ ಕರ್ನಾಟಕ ಭಾಗದ ಮಠಾಧೀಶರು ಒತ್ತಾಯ ಮಾಡಿದ್ದಾರೆ. ಶ್ರೀ ರಾಜೇಶ್ವರ ಶಿವಾಚಾರ್ಯ ಹಾಗೂ ಭಾಲ್ಕಿ ಹಿರೇಮಠದ ಗುರುಬಸವಾ ಪಟ್ಟದ್ದೆವರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಸ್ವಾಮೀಜಿಗಳು ಒತ್ತಾಯಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಅವರಿಗೆ ಸಿಎಂ ಸ್ಥಾನ ನೀಡಲು ಸ್ವಾಮೀಜಿಗಳು ಬೇಡಿಕೆ ಇಟ್ಟಿದ್ದಾರೆ. ವೀರೇಂದ್ರ ಪಾಟೀಲ್ ಬಳಿಕ ಈ ಭಾಗಕ್ಕೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿಲ್ಲ, ಹೀಗಾಗಿ ಈ ಬಾರಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್​ ಈ ಭಾಗಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಕೇಳುತ್ತಿದ್ದಾರೆ.
ಇದನ್ನೂ ಓದಿ:ಪತ್ನಿಯನ್ನು ಕಾಪಾಡಲು ಬಂದ ಪೊಲೀಸ್​ ಅಧಿಕಾರಿಯ ಮೂಗು ಮುರಿದು ಎಸ್ಕೇಪ್​ ಆದ ಗಂಡ!
ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗಬೇಕಾದರೆ ಈ ಭಾಗದವರು ಮುಖ್ಯಮಂತ್ರಿ ಆದಾಗ ಮಾತ್ರ ಅದು ಸಾಧ್ಯ. ಸಿಎಂ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ಅನಿವಾರ್ಯವಾಗಿದೆ. ಸ್ವಾಮೀಜಿಗಳ ನಿಯೋಗದೊಂದಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಒತ್ತಾಯಿಸುತ್ತೆವೆ ಎಂದು ಮಠಾಧೀಶರು ಹೇಳಿದ್ದಾರೆ.(ದಿಗ್ವಿಜಯ ನ್ಯೂಸ್​)
ಆಘಾತದಿಂದ ಹೊರ ಬಾರದ ಪರಾಜಿತರು: ಹಂಗಾಮಿ ಸಿಎಂ ಬೊಮ್ಮಾಯಿ ಬಳಿ ಬೇಸರ ನಿವೇದನೆ

ಅಧಿಕಾರ ಹಸ್ತಾಂತರದ ಖಾತರಿ ಏನು?: ಡಿಕೆಶಿ ಬಣದ ಆತಂಕ; ಛತ್ತೀಸ್​ಗಢ, ರಾಜಸ್ಥಾನದ ನಿದರ್ಶನ

ಅಮ್ಮನನ್ನು ಕಳೆದುಕೊಳ್ಳುವ ನೋವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
