ಬೆಂಗಳೂರು:ವಿಧಾನಪರಿಷತ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನತ್ತ ವ್ಯಕ್ತಿಯೊಬ್ಬ ಮೊಟ್ಟೆ ಎಸೆದ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಸಿಕ್ಕಿದೆ. ಇದರಿಂದಾಗಿ ಮೊಟ್ಟೆ ಎಸೆದ ವ್ಯಕ್ತಿ ನಿಜಕ್ಕೂ ಯಾವ ಪಕ್ಷಕ್ಕೆ ಸೇರಿದವ ಎಂಬ ಅನುಮಾನವೊಂದು ಕೆಲವರಲ್ಲಿ ಕಾಡಲಾರಂಭಿಸಿದೆ.
ಏಕೆಂದರೆ ಮೊಟ್ಟೆ ಎಸೆದಿದ್ದ ಎನ್ನಲಾದ ವ್ಯಕ್ತಿ ಸಂಪತ್, ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾರೆ. ತನ್ನತ್ತ ಮೊಟ್ಟೆ ಎಸೆದಿದ್ದು ಬಿಜೆಪಿ ಕಾರ್ಯಕರ್ತ ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್​ ನಾಯಕರೂ ಅದನ್ನೇ ದೊಡ್ಡ ವಿಷಯವಾಗಿ ಬಿಂಬಿಸಿ ಹೋರಾಟಕ್ಕೂ ಇಳಿದಿದ್ದಾರೆ. ಆದರೆ ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಸಂಪತ್ ಸ್ವತಃ ಹೇಳಿಕೊಂಡಿದ್ದರಿಂದ ಕಾಂಗ್ರೆಸ್​ ನಾಯಕರಿಗೆ ಮುಜುಗರ ಉಂಟಾಗುವಂಥ ಪ್ರಕರಣವೂ ನಡೆದಿದೆ.
ಸಿದ್ದರಾಮಯ್ಯರತ್ತ ಮೊಟ್ಟೆ ಎಸೆದಿದ್ದ ವ್ಯಕ್ತಿ ಕಾಂಗ್ರೆಸ್​ ಕಾರ್ಯಕರ್ತ ಎಂದು ಬಿಜೆಪಿಯವರು ಈ ವಿಚಾರವನ್ನು ಕಾಂಗ್ರೆಸ್​ನತ್ತ ತಿರುಗುಬಾಣವಾಗಿಸುವ ಪ್ರಯತ್ನ ಮಾಡುತ್ತಿರುವಾಗಲೇ ಸಿದ್ದರಾಮಯ್ಯ ಪ್ರತ್ಯಾಸ್ತ್ರ ಬಳಸಿದ್ದು, ಮೊಟ್ಟೆ ಪ್ರಕರಣಕ್ಕೆ ಮತ್ತೊಂದು ತಿರುವು ಕೊಟ್ಟಿದೆ. ಮೊಟ್ಟೆ ಎಸೆದ ವ್ಯಕ್ತಿ ಬಿಜೆಪಿಯವ, ಅದಕ್ಕೆ ಬಿಜೆಪಿ ಶಾಸಕ ರಾತ್ರೋರಾತ್ರಿ ಆ ವ್ಯಕ್ತಿಯನ್ನು ಪೊಲೀಸ್ ಠಾಣೆಯಿಂದ ಬಿಡಿಸಿಕೊಂಡು ಹೋಗಿದ್ದೇ ಸಾಕ್ಷಿ ಎಂಬ ರೀತಿಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
“ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಬಂದಿದ್ದು ಯಾಕೆ? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? ‘ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡ ಬಿಜೆಪಿ ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ. ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ?” ಎಂಬುದಾಗಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಹೀಗಾಗಿ ಆ ಸಂಪತ್ ನಿಜಕ್ಕೂ ಯಾವ ಪಕ್ಷದ ಕಾರ್ಯಕರ್ತ ಎಂಬ ಬಗ್ಗೆ ಇದೀಗ ಗೊಂದಲ ಉಂಟಾದಂತಾಗಿದೆ.
ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ@BJP4Karnatakaಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು?ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? 1/3pic.twitter.com/R4Xjqwyz5D— Siddaramaiah (@siddaramaiah)August 20, 2022
ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ@BJP4Karnatakaಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು?ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? 1/3pic.twitter.com/R4Xjqwyz5D
‘ಜೊತೆ ಜೊತೆಯಲಿ’ ಸೆಟ್‌ನಲ್ಲಿ ಅನಿರುದ್ಧ್ ಹೇಗಿರುತ್ತಿದ್ದರು? ಸಾಕಷ್ಟು ಸಂಗತಿ ಬಯಲು ಮಾಡಿದ ನಿರ್ದೇಶಕ
ಮದ್ಯಪಾನ-ಧೂಮಪಾನ ಪ್ರಿಯರಿಗಿದು ಆಘಾತಕಾರಿ ಸುದ್ದಿ; ಸಮೀಕ್ಷೆಯೊಂದು ಹೊರಗೆಡಹಿದೆ ಭೀಕರ ಸಂಗತಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
