ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಾಜ್ಯದ ಜೆಡಿಎಸ್ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್‌ನಿಂದ ಅಮಾನತು ಮಾಡಲಾಗಿದೆ.
ಈ ಬಗ್ಗೆ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಸಂವಿಧಾನ ಹಾಗೂ ನಿಯಮಗಳ ಅಡಿಯಲ್ಲಿ ಶಿಸ್ತು ಉಲ್ಲಂಘನೆ ಮಾಡಿದ ಕಾರಣದಿಂದ ಇಬ್ರಾಹಿಂ ಅವರನ್ನು ಸಸ್ಪಂಡ್ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಪಕ್ಷದ ನಿರ್ಣಯವನ್ನು ಇಬ್ರಾಹಿಂ ಸ್ಪಷ್ಟವಾಗಿ ಉಲ್ಲಂಘನೆ ಮಾಡಿರುತ್ತಾರೆ ಎಂದು ಹೇಳಿದ್ದಾರೆ.
ಅಮಾನತು ಹಿನ್ನೆಲೆ:ಕರ್ನಾಟಕ ಪ್ರದೇಶ ಜನತಾದಳದ ರಾಜ್ಯಾಧ್ಯಕ್ಷರನ್ನು ಒಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಪಕ್ಷದ ಸಂವಿಧಾನದ ಆರ್ಟಿಕಲ್ 10ರ ಅನ್ವಯ ಕಳೆದ ಅಕ್ಟೋಬರ್ 19ರಂದು ವಿಸರ್ಜನೆ ಮಾಡಿ ರಾಷ್ಟ್ರೀಯ ಅಧ್ಯಕ್ಷರು ಆದೇಶ ಹೊರಡಿಸಿದ್ದರು.ತದ ನಂತರ ಇಬ್ರಾಹಿಂ ನವೆಂಬರ್ 7ರಂದು ಚಿಂತನ ಮಂಥನ ಎನ್ನುವ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಮಾನಾಂತರ ಸಭೆ ಕರೆದು ಜೆಡಿಎಸ್-ಬಿಜೆಪಿ ಮೈತ್ರಿಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಿ ಸುಳ್ಳು ಆರೋಪಗಳನ್ನು ಮಾಡಿದ್ದರು.
ನವೆಂಬರ್ 7ರಂದು ತಾವಿನ್ನೂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮುಂದುವರಿದಿದ್ದೇನೆ ಎಂದು ತಿಳಿಸಿ, ಬಿಜೆಪಿ ಜತೆ ಮೈತ್ರಿಗೆ ಒಲವು ಇರುವವರೆಲ್ಲರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷ ವಿರೋಧಿ ಹೇಳಿಕೆಯನ್ನೂ ನೀಡಿರುತ್ತಾರೆ.
ನವೆಂಬರ್ 15ರಂದು ಕೇರಳದ ತಿರುವನಂತಪುರದಲ್ಲಿ ಸಿ.ಕೆ.ನಾನು ಅವರ ನೇತೃತ್ವದಲ್ಲಿ ಪಕ್ಷ ವಿರೋಧಿ ಸಭೆಯನ್ನು ನಡೆಸಿ, ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುತ್ತಾರೆ. ಈ ಎಲ್ಲ ನಡವಳಿಕೆ, ಹೇಳಿಕೆಗಳ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + fourteen =
Remember me
