ಬೆಂಗಳೂರು: ಕರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಗೆ ಗಂಟಲ ದ್ರವದ ಮಾದರಿ ಸಂಗ್ರಹಿಸಿದ ಒಂದು ಗಂಟೆಯೊಳಗೆ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
ಸೋಂಕಿತರನ್ನು ಶೀಘ್ರ ಪತ್ತೆ ಹಚ್ಚಲು ನಿತ್ಯ 25 ಸಾವಿರಕ್ಕೂ ಹೆಚ್ಚು ಮಂದಿಗೆ ಆಂಟಿಜೆನ್ ಪರೀಕ್ಷೆ ನಡೆಯುತ್ತಿದ್ದು, ಲಕ್ಷಣರಹಿತ ವ್ಯಕ್ತಿಗಳಿಗೆ ಫಲಿತಾಂಶ ಪಾಸಿಟಿವ್ ಬಂದಲ್ಲಿ ಆರ್​ಟಿಪಿಸಿಆರ್ ಪರೀಕ್ಷೆ ನಡೆಸಲಾಗುವುದು. ಇದರಿಂದ ಪ್ರಯೋಗಾಳಯದ ಮೇಲಿನ ಒತ್ತಡ ಕಡಿಮೆ ಆಗಲಿದೆ, ಆಂಟಿಜೆನ್ ಪರೀಕ್ಷೆ ನಡೆಸಿದ ಅರ್ಧ ಗಂಟೆಯಲ್ಲಿ ಫಲಿತಾಂಶ ಒದಗಿಸಲಾಗುತ್ತದೆ ಎಂದು ಆಯುಕ್ತ ಪಂಕಜ್​ಕುಮಾರ್ ಪಾಂಡೆ ತಿಳಿಸಿದ್ದಾರೆ.
ಇದನ್ನೂ ಓದಿ:ವಾರದಲ್ಲಿ ಎರಡು ಸಾವಿರ ಹೆಚ್ಚುವರಿ ವೈದ್ಯರು ಕೊವಿಡ್ ಚಿಕಿತ್ಸೆಗೆ ಲಭ್ಯ; ಸಚಿವ ಸುಧಾಕರ್ ಮಾಹಿತಿ
ಸೋಂಕಿತರ ಸಂಪರ್ಕ ಹೊಂದಿರುವವರು, ಹಿರಿಯ ನಾಗರಿಕರು, ಅಸ್ವಸ್ಥಗೊಂಡವರಿಗೆ ಆಂಟಿಜೆನ್ ಪರೀಕ್ಷೆ ನಡೆಸಲಾಗುವುದು. ಪ್ರಯೋಗಾಲಯಗಳು, ಆಸ್ಪತ್ರೆಗಳು ಹಾಗೂ ವೈದ್ಯಕೀಯ ಸಂಸ್ಥೆಗಳು ಪರೀಕ್ಷೆಯ ಯಾವುದೇ ಫಲಿತಾಂಶವನ್ನು ಕಡ್ಡಾಯವಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) ಪೋರ್ಟಲ್​ನಲ್ಲಿ ದಾಖಲಿಸಬೇಕು. ಖಾಸಗಿ ಪ್ರಯೋಗಾಲಯಗಳು ವೈಯಕ್ತಿಕ ಸುರಕ್ಷತಾ ಸಾಧನ ವೆಚ್ಚ (ಪಿಪಿಇ ಕಿಟ್) ಒಳಗೊಂಡು ಪ್ರತಿ ಪರೀಕ್ಷೆಗೆ 700 ರೂ. ಶುಲ್ಕ ಮಾತ್ರ ಪಡೆಯಬೇಕು. ಹೆಚ್ಚಿನ ಹಣ ವಸೂಲಿ ಮಾಡಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ:ಕರೊನಾ ಲಸಿಕೆ ಟೀಕಿಸುವವರಿಗೆ ದಿಟ್ಟ ಉತ್ತರ ನೀಡಿದ ರಷ್ಯಾ; ದಾಖಲೆಗಳನ್ನು ಜಗತ್ತಿನ ಮುಂದಿಡ್ತೀವಿ
ಸೋಂಕು ಲಕ್ಷಣ ಹೊಂದಿರುವ ವ್ಯಕ್ತಿಗಳಿಂದ ಎರಡು ಮಾದರಿಗಳನ್ನು ಸಂಗ್ರಹಿಸಲಾಗುತ್ತದೆ. ಮೊದಲ ವರದಿ ಆಧರಿಸಿ ಇನ್ನೊಂದು ಮಾದರಿಯನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಲ್ಯಾಬ್​ಗಳು ಲಕ್ಷಣಸಹಿತ ಹಾಗೂ ಲಕ್ಷಣರಹಿತ ವ್ಯಕ್ತಿಗಳ ಮಾದರಿಗಳನ್ನು ಪ್ರತ್ಯೇಕವಾಗಿಡಬೇಕು. ಲಕ್ಷಣ ಇರುವವರು ಹಾಗೂ ಇಲ್ಲದವರು ಯಾರೇ ಆದರೂ ಪರೀಕ್ಷೆ ಫಲಿತಾಂಶ ಬರುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಬೇಕು ಎಂದು ಸೂಚಿಸಿದ್ದಾರೆ.
https://www.vijayavani.net/s-porn-vedio-honeytrap-arrest-chennai/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 16 =
Remember me
