ಬೆಂಗಳೂರು:ಕರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನುಮುಂದೆ ಮುಖ್ಯಮಂತ್ರಿ ಭೇಟಿ ತುಸು ಕಷ್ಟವಾಗಲಿದೆ. ಯಡಿಯೂರಪ್ಪನವರನ್ನು ಭೇಟಿ ಮಾಡಲು ಬರುವ ಸಾರ್ವಜನಿಕರು, ನಿಯೋಗಗಳ ಸದಸ್ಯರಿಗೆ ಆ್ಯಂಟಿಜೆನ್​ ಪರೀಕ್ಷೆ ಕಡ್ಡಾಯವಾಗಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಮತ್ತು ಅಧಿಕೃತ ನಿವಾಸ ಕಾವೇರಿಯಲ್ಲಿ ಆ್ಯಂಟಿಜೆನ್​ ತಪಾಸಣಾ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಭೇಟಿಗೆ ಬರುವವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಲೇಬೇಕು. ಅದರಲ್ಲಿ ಪಾಸಿಟಿವ್​ ಬಂದರೆ ಭೇಟಿಗೆ ಅವಕಾಶ ಇರುವುದಿಲ್ಲ. ಹಾಗೇ ಅಂಥವರನ್ನು ಆರ್​ಟಿಪಿಸಿಎಆರ್​ ತಪಾಸಣೆಗೆ ಒಳಪಡಿಸಲಾಗುತ್ತದೆ. ಅದರಲ್ಲೂ ಪಾಸಿಟಿವ್​ ಬಂದವರನ್ನು ಆಸ್ಪತ್ರೆಗೆ ಕಳುಹಿಸುವ ಏರ್ಪಾಡು ಮಾಡಲಾಗಿದೆ.
ಆದರೆ, ಈ ನಿಯಮ ಸಿಎಂ ಭೇಟಿ ಮಾಡಲು ಬರುವ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಅಧಿಕಾರಿಗಳು ವಾರಕ್ಕೊಮ್ಮೆ ಕರೊನಾ ಪರೀಕ್ಷೆಗೆ ಒಳಪಡುವುದರಿಂದ ಅವರು ಪ್ರತಿ ದಿನ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಲಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − two =
Remember me
