
ಬೆಂಗಳೂರು:ಅನುದಾನಿತ ಶಾಲೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ತಿಂಗಳೊಳಗೆ ಅನುದಾನಕ್ಕೊಳಪಡಿಸುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.ಬಿಜೆಪಿಯ ಎಸ್.ವಿ.ಸಂಕನೂರ್ ಅವರು, ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ. ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ತೆರೆವಾಗಿರುವ ಹುದ್ದೆಗಳನ್ನು ಭರ್ತಿಗೆ ಉಚ್ಚ ನ್ಯಾಯಾಲಯವು ತೀರ್ಪು ನೀಡಿದರೂ ಸಹ ಅನುಮತಿಸದಿರುವ ಬಗ್ಗೆ ಪ್ರಸ್ತಾಪಿಸಿದ್ದರು. 9 ವರ್ಷಗಳಿಂದ ಖಾಲಿ ಹುದ್ದೆಗೆ ಅನುಮತಿ ನೀಡದ ಕಾರಣ ಬಹಳ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿವೆ ಎಂದರು.ಅದಕ್ಕೆ ಉತ್ತರಿಸಿದ ಸಚಿವರು, ಸಮಸ್ಯೆ ಇತ್ಯರ್ಥಪಡಿಸಲು, 9 ವರ್ಷದ ಬಾಕಿಯನ್ನು 5 ವರ್ಷಕ್ಕೆ ಇಳಿಸಿ ಅನುದಾನಕ್ಕೆ ಒಳಪಡಿಸಲು ಕ್ರಮ ವಹಿಸಲಾಗಿದೆ ಎಂದರು.ಬಿಜೆಪಿಯ ಎಸ್.ವಿ.ಸಂಕನೂರ್, ರಾಜ್ಯವು ಅದರ ಆರ್ಥಿಕ ಸಾಮರ್ಥ್ಯದ ಮಿತಿಯೊಳಗೆ ಕೆಲಸ, ಶಿಕ್ಷಣ ಮತ್ತು ಸಾರ್ವಜನಿಕ ಸಹಾಯದ ಹಕ್ಕನ್ನು ಭದ್ರಪಡಿಸಿಕೊಳ್ಳಲು ಪರಿಣಾಮಕಾರಿ ನಿಬಂಧನೆಗಳನ್ನು ಮಾಡಬೇಕೆಂದು ಆದೇಶಿಸುತ್ತದೆ. ಅದರಂತೆ, ಕರ್ನಾಟಕ ಶಿಕ್ಷಣ ಕಾಯ್ದೆ 49ರಲ್ಲಿ ರಾಜ್ಯ ಸರ್ಕಾರವು ತನ್ನ ಆರ್ಥಿಕ ಸಾಮರ್ಥ್ಯದ ಮಿತಿಯೊಳಗೆ ಮತ್ತು ರಾಜ್ಯದ ಆರ್ಥಿಕ ಸಾಮರ್ಥ್ಯವನ್ನು ಗಮನದಲ್ಲಿಟ್ಟುಕೊಂಡು ಮಾನ್ಯತೆ ಪಡೆದ ಸಂಸ್ಥೆಗಳಿಗೆ ಅನುದಾನ-ಸಹಾಯ ನೀಡಲು ಮೊತ್ತವನ್ನು ನಿಗದಿಪಡಿಸುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ ಎಂದರು.ಉಚ್ಚ ನ್ಯಾಯಲಯದ ತೀರ್ಪಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಪು ನೀಡಿರುತ್ತದೆ. ಆದರೆ ಕರ್ನಾಟಕ ಶಿಕ್ಷಣ ಕಾಯ್ದೆ ಕಲಂ 53ರನ್ವಯ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸುವುದು ಅಥವಾ ಒಳಪಡಿಸದಿರುವುದು ಸರ್ಕಾರದ ಆರ್ಥಿಕ ಪರಿಮಿತಿಗೊಳಪಡುವ ನೀತಿಯ ವಿಷಯವಾಗಿದೆ ಎಂದರು.
ಅನಧಿಕೃತ ಶಾಲೆರಾಜ್ಯ ಪಠ್ಯಕ್ರಮ ಬೋಧನೆಗೆ ಅವಕಾಶ ಪಡೆದು ಕೇಂದ್ರ ಪಠ್ಯಕ್ರಮದ ಅನುಮತಿಗಾಗಿ ಪ್ರಸ್ತಾವನೆ ಸಲ್ಲಿಸಿರುವ ಶಾಲೆಗಳನ್ನ ಅನಧಿಕೃತ ಶಾಲೆ ಎಂದು ಪರಿಗಣಿಸಬಾರದು ಎಂದು ಕಾಂಗ್ರೆಸ್‌ನ ಪುಟ್ಟಣ್ಣ ಮೇಲ್ಮನೆಯಲ್ಲಿ ಪ್ರಸ್ತಾಪಿಸಿದರು.ಅದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಮುಂಚೆ 3 ವರ್ಷದ ಎನ್‌ಓಸಿ ತಗೊಬೇಕು ಅಂತ ಇತ್ತು. ಈ ಬಾರಿ ನಮ್ಮತ್ರ ಎನ್‌ಓಸಿ ತೆಗೆದುಕೊಂಡರೂ ಸಾಕು. ಈ ಬಗ್ಗೆ ಸಭೆ ನಡೆಸಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 12 =
Remember me
