ಬೆಂಗಳೂರು:ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆಗೆ ದರ ನಿಗದಿಪಡಿಸಿ 2022ರ ನ.25ರಂದು ರಾಜ್ಯ ಸಾರಿಗೆ ಇಲಾಖೆ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸಾರಿಗೆ ಇಲಾಖೆಯ ಅಧಿಸೂಚನೆ ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳಾದ ಎಎನ್‌ಐ ಟೆಕ್ನಾಲಜೀಸ್ ಪ್ರೈ.ಲಿ. (ಓಲಾ), ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈ.ಲಿ. ಹಾಗೂ ರೊಪ್ಪೆನ್ ಟ್ರಾನ್ಸ್‌ಪೊರ್ಟೇಷನ್ ಸರ್ವೀಸಸ್ (ರ್ಯಾಪಿಡೋ) ಸಲ್ಲಿಸಿದ್ದ ಅರ್ಜಿಗಳನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಪೀಠ ಈ ಮಧ್ಯಂತರ ಆದೇಶ ಮಾಡಿದೆ.
ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸುವಂತೆ ಸೂಚಿಸಿ ಸಾರಿಗೆ ಇಲಾಖೆ ಹೊರಡಿಸಿರುವ ಆದೇಶ ಪ್ರಶ್ನಿಸಿ ಈ ಮೊದಲು ಸಲ್ಲಿಕೆ ಆಗಿರುವ ಅರ್ಜಿಗಳು ಇತ್ಯರ್ಥ ಆಗುವವರೆಗೆ, ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆಗೆ ದರ ನಿಗದಿಪಡಿಸಿ ಕಳೆದ ನ.25ರಂದು ಸಾರಿಗೆ ಇಲಾಖೆ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲಾಗಿದೆ ಎಂದು ತಿಳಿಸಿದ ಹೈಕೋರ್ಟ್, ವಿಚಾರಣೆಯನ್ನು ಜ.12ಕ್ಕೆ ಮುಂದೂಡಿತು.
ಶೇ.5 ಹೆಚ್ಚುವರಿ ಶುಲ್ಕ ಸಾಲದು ಎಂದ ಕಂಪನಿಗಳು:ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸುವಂತೆ ಸೂಚಿಸಿ ಕಳೆದ ಅ.11ರಂದು ಸಾರಿಗೆ ಇಲಾಖೆ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಸಲಹೆಯಂತೆ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಸರ್ಕಾರ ತಿಳಿಸಿತ್ತು.
ಬಳಿಕ, ಆಟೋರಿಕ್ಷಾ ಅಗ್ರಿಗೇಟರ್ ಸೇವೆ ಒದಗಿಸಲು ಚಾಲ್ತಿಯಲ್ಲಿರುವ ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ಕಾಲಕಾಲಕ್ಕೆ ನಿಗದಿ ಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಹಾಗೂ ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣದರ ನಿಗದಿಪಡಿಸಲು ರಾಜ್ಯ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳಿಗೆ ನಿರ್ದೇಶಿಸಿ ಸಾರಿಗೆ ಇಲಾಖೆ ನ.25ರಂದು ಅಧಿಸೂಚನೆ ಹೊರಡಿಸಿತ್ತು.
ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದ ಅಗ್ರಿಗೇಟರ್ ಸಂಸ್ಥೆಗಳು, ಪ್ರಯಾಣದ ದರದ ಮೇಲೆ ಶೇ.5 ಸೇವಾ ಶುಲ್ಕ ಹಾಗೂ ಅನ್ವಯಿಸುವ ಜಿಎಸ್‌ಟಿ ಸೇರಿಸಿ ಅಂತಿಮ ದರ ನಿಗದಿಪಡಿಸಲು ಸಾರಿಗೆ ಇಲಾಖೆ ನಿರ್ದೇಶಿಸಿದೆ. ಇದು ತೀರಾ ಕಡಿಮೆಯಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಪ್ರಯಾಣಿಕರಿಂದ ಪಡೆಯುವ ಶುಲ್ಕದ ಶೇ.20ರವರೆಗೆ ಸೇವಾ ಶುಲ್ಕ ಪಡೆಯಲು ಅವಕಾಶವಿದೆ. ಸೇವಾ ಶುಲ್ಕವನ್ನು ಪ್ರಯಾಣ ದರವೆಂದು ಅರ್ಥೈಸಲಾಗುವುದಿಲ್ಲ. ಆದ್ದರಿಂದ, ದರ ನಿಗದಿಪಡಿಸಲು ಅಥವಾ ನಿಯಂತ್ರಿಸಲು ರಾಜ್ಯ ಸರ್ಕಾರ ಸಕ್ಷಮ ಪ್ರಾಧಿಕಾರವಲ್ಲ ಎಂದು ಆಕ್ಷೇಪಿಸಿದ್ದವು.
ಆನೇಕಲ್​ನಲ್ಲಿ ಈ ನಾಗರಹಾವಿನ ನಡೆಯೇ ವಿಚಿತ್ರ-ವಿಸ್ಮಯ! ಹಾವು ನೋಡಲು ಜನವೋ ಜನ

ಸ್ಯಾಂಟ್ರೋ ರವಿ ಹೆಸರು ಹೇಳುತ್ತಲೇ ಹೊಸ ಬಾಂಬ್​ ಸಿಡಿಸಿದ ಎಚ್​ಡಿಕೆ! ಈ ಸತ್ಯ ಹೇಳ್ತೀರಾ ಸಿಎಂ ಬೊಮ್ಮಾಯಿ ಅವರೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eleven =
Remember me
