ಬೆಂಗಳೂರು:ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಬಗರ್ ಹುಕುಂ ಆಪ್ ರೂಪಿಸಿದೆ.ಆಪ್ ಬಿಡುಗಡೆ ಮಾಡಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ. ಹೀಗಾಗಿ ಬಗರ್ ಹುಕುಂ ತಂತ್ರಾಶ ಬಳಸಿ ಅರ್ಜಿ ವಿಲೇ ಮಾಡಲಾಗುತ್ತದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ಗ್ರಾಮ ಲೆಕ್ಕಿಗ ಸ್ಥಳಕ್ಕೆ ತೆರಳಿ ಈ ಆಪ್ ಮೂಲಕ ಜಿಯೋ ಫೆನ್ಸ್ ಮಾಡಿ ಆ ಮಾಹಿತಿಯನ್ನು ಕಂದಾಯ ನಿರೀಕ್ಷಕ ಹಾಗೂ ಸರ್ವೇ ಇಲಾಖೆ ಲಾಗಿನ್‌ಗೆ ಕಳುಹಿಸುತ್ತಾರೆ. ಇದರ ಸಹಾಯದಿಂದ ತಹಶೀಲ್ದಾರರು ಸ್ಯಾಟಲೈಟ್ ಇಮೇಜ್ ಪಡೆದು ನಿಜಕ್ಕೂ ಅಲ್ಲಿ ಕೃಷಿ ನಡೆಸುತ್ತಿದ್ದಾರೆಯೆ? ಎಂಬ ಮಾಹಿತಿ ಕಲೆಹಾಕುತ್ತಾರೆ. ಅಲ್ಲದೆ ಆ ಇಮೇಜ್ ಜತೆಗೆ ಎಲ್ಲ ಮಾಹಿತಿಯನ್ನು ಬಗರ್ ಹುಕುಂ ಕಮಿಟಿ ಮುಂದೆ ಸಲ್ಲಿಸಿ ಒಟಿಪಿ ಮೂಲಕ ಕೆವೈಸಿ ಮಾಡುವ ಮೂಲಕ ಋಜುವಾತು ಮಾಡುತ್ತಾರೆ.ನಂತರ ಅರ್ಹ ಫಲಾನುಭವಿಗಳಿಗೆ ಪೇಮೆಂಟ್ ನೊಟೀಸ್ ನೀಡಿ ಹಣ ಪಾವತಿಯಾಗುತ್ತಿದ್ದಂತೆ ಅವರಿಗೆ ಹೊಸ ಸರ್ವೇ ನಂಬರ್ ಹಾಗೂ ಡಿಜಿಟಲ್ ಇ-ಸಾಗುವಳಿ ಚೀಟಿ ನೀಡಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
