ನವದೆಹಲಿ:ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದರು.
ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು, ಮಕ್ಕಳಿಗೆ ಪೌಷ್ಠಿಕ ಆಹಾರ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್ ಕೆಜಿ, ಯುಕೆಜಿ) ನೀಡಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.
ಕೇಂದ್ರ ಸಹಭಾಗಿತ್ವದ ವಿವಿಧ ಯೋಜನೆಗಳ ಜಾರಿಗೆ ರಾಜ್ಯಕ್ಕೆ ಬಿಡುಗಡೆ ಆಗಬೇಕಿರುವ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಅಕ್ಕಿ, ಗೋಧಿಯನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಕೋರಿದರು.
ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಕರ್ಯ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನದ ನೆರವು ಅಗತ್ಯವಿದೆ. ಹಾಗಾಗಿ, ಜರೂರಾಗಿ ಅನುದಾನವನ್ನು ಬಿಡುಗಡೆ ಮಾಡಬೇಕು. ಪ್ರಮುಖವಾಗಿ ರಾಜ್ಯದಲ್ಲಿ ಹೊಸದಾಗಿ ಸೃಜನೆಗೊಂಡ ತಾಲ್ಲೂಕುಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ವಿವಿಧ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್ ಸೇರಿದಂತೆ ಕೇಂದ್ರ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಹಲವು ಬೇಡಿಕೆಗಳ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲ ಮಾಹಿತಿಗಳನ್ನು ಅತ್ಯಂತ ತಾಳ್ಮೆಯಿಂದ ಪಡೆದುಕೊಂಡಿರುವ ಕೇಂದ್ರ ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ-ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 6 =
Remember me
