ಬೆಂಗಳೂರು:ಬಾಬಾ ಬುಡಾನ್ ಗಿರಿ ದತ್ತಪೀಠದಲ್ಲಿ ಪೂಜಾ ವಿಧಾನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ.
ನ್ಯಾ.ಅಲೋಕ್ ಅರಾಧೆ ಮತ್ತು ನ್ಯಾ.ವಿಜಯಕುಮಾರ್ ಎ.ಪಾಟೀಲ್ ಅವರಿದ್ದ ವಿಭಾಗೀಯಪೀಠ, ಏಕಸದಸ್ಯ ಪೀಠ 2018ರ ಮಾ.19ರಂದು ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ. ಜತೆಗೆ ಆನಂತರದ ಬೆಳವಣಿಗೆಗಳಲ್ಲಿ 2022ರಲ್ಲಿ ನ್ಯಾಯಾಲಯದ ನಿರ್ದೇಶನದಂತೆ ಹೊಸದಾಗಿ ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಮುಜಾವರ್ ಹಾಗೂ ಅರ್ಚಕರಿಂದ ಪೂಜಾವಿಧಿಗೆ ಅವಕಾಶ ನೀಡಿ ಹೊರಡಿಸಿದ್ದ ಆದೇಶ ಸದ್ಯ ಚಾಲ್ತಿಯಲ್ಲಿದ್ದು, ಅದರ ಮುಂದುವರಿಕೆಗೆ ನ್ಯಾಯಾಲಯ ಸಮ್ಮತಿ ಸೂಚಿಸಿದೆ. ಇದರಿಂದ ದಶಕಗಳಿಂದ ಇದ್ದ ಪೂಜಾ ವಿಧಾನದ ಹೋರಾಟ ಒಂದು ತಾರ್ಕಿಕ ಘಟ್ಟ ತಲುಪಿದಂತಾಗಿದೆ.
ಇದನ್ನೂ ಓದಿ:ಪತ್ನಿಯನ್ನು ಕೊಂದು ಶವ ತುಂಡು ತುಂಡು ಮಾಡಿ ವಾಟರ್​ ಟ್ಯಾಂಕ್​ನೊಳಕ್ಕೆ ಹಾಕಿದ್ದ; ತಿಂಗಳ ಬಳಿಕ ವಿಷಯ ಬಹಿರಂಗ
ವಿಭಾಗೀಯ ಪೀಠವು ತನ್ನ 51 ಪುಟಗಳ ತೀರ್ಪಿನಲ್ಲಿ ನಮ್ಮ ಸಂವಿಧಾನದ ಹೆಗ್ಗುರುತು ಎಂದರೆ ಎಲ್ಲ ಧರ್ಮ, ಲಿಂಗ, ಜಾತಿ, ಮೇಲು, ಕೀಳುಗಳನ್ನೆಲ್ಲ ತೊಡೆದುಹಾಕಿ ಸಮಾನ ಸಮಾಜ ನಿರ್ಮಿಸುವುದಾಗಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ ಕಲಂ 25ರಿಂದ 30ರವರೆಗೆ ಅಂಶಗಳನ್ನು ಅಡಕ ಮಾಡಲಾಗಿದೆ. ಕಲಂ 25(1)ರ ಸಾರ್ವಜನಿಕ ವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಯಾವುದೇ ವ್ಯಕ್ತಿ ತನಗಿಷ್ಟ ಬಂದ ಧರ್ಮವನ್ನು ಪಾಲಿಸಬಹುದು, ಆಚರಣೆ ಮಾಡಬಹುದು ಮತ್ತು ಅದನ್ನು ಪ್ರಚಾರ ಮಾಡಬಹುದು ಎಂದು ನ್ಯಾಯಪೀಠ ತಿಳಿಸಿದೆ.
ಇದನ್ನೂ ಓದಿ:ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ
ಅಲ್ಲದೆ, ಕಲಂ 26ರ ಪ್ರಕಾರ ಧಾರ್ಮಿಕ ಕೇಂದ್ರಗಳನ್ನು ಸರ್ಕಾರಗಳು ರಕ್ಷಿಸಬೇಕಾಗಿದೆ. ರಾಜ್ಯ ಸರ್ಕಾರ ಈ ಸೂಕ್ಷ್ಮತೆಯನ್ನು ಅರಿತು ಎರಡೂ ಧರ್ಮದವರ ಪ್ರತಿನಿಧಿಗಳ ಜತೆ ಸಮಾಲೋಚಿಸಿ ನಿರ್ವಹಣೆಗೆ ಕ್ರಮ ಕೈಗೊಂಡಿದೆ. ಸರ್ಕಾರ ರಚಿಸಿರುವ ಸಮಿತಿ ಯಾವುದೇ ಧರ್ಮದವರಿಂದಲೂ ದೂರಿಲ್ಲದ ರೀತಿಯಲ್ಲಿ ಧಾರ್ಮಿಕ ಕೇಂದ್ರದ ವ್ಯವಹಾರಗಳನ್ನು ನಿರ್ವಹಿಸಿಕೊಂಡು ಬರುತ್ತಿದೆ. ಕೋರ್ಟ್ ಆದೇಶದ ನಂತರದ ಕ್ರಮಗಳು ಏಕಪಕ್ಷೀಯ, ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಯಾವುದೇ ಸಮಾಜದವರು ಆಕ್ಷೇಪ ಎತ್ತಿಲ್ಲ ಎಂದೂ ನ್ಯಾಯಾಲಯ ಹೇಳಿದೆ.
ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ತಮ್ಮ ನಡವಳಿಕೆಯಿಂದ ನಿಜವಾದ ಜಾತ್ಯತೀತೆಯ ತಾಜಾ ಉದಾಹರಣೆ ಆಗಿದ್ದಾರೆ. ಅಲ್ಲದೆ, ಕೋರ್ಟ್ ಸಹ ಧಾರ್ಮಿಕ ಕೇಂದ್ರಗಳ ಸಂಪ್ರದಾಯ ಮತ್ತು ವಿಧಿವಿಧಾನಗಳ ಬಗ್ಗೆ ಜಾಗರೂಕವಾಗಿರುತ್ತದೆ. ಹಾಗಾಗಿ ಸಾಮಾನ್ಯವಾಗಿ ನ್ಯಾಯಾಲಯಗಳು ಇಂತಹ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅದರಲ್ಲೂ ವಿಶೇಷವಾಗಿ ಭಕ್ತಾಧಿಗಳ ನಡುವಿನ ಮೂಲಭೂತ ಹಕ್ಕುಗಳ ವಿಷಯ. ಹಾಗಾಗಿ ಈ ಕಾರಣಕ್ಕೆ ನ್ಯಾಯಾಲಯ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ:ಬಾರ್‌ಗೆ ಬಂದ ಕಡಲಾಮೆ!; ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ
ಸದ್ಯ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಸದಸ್ಯರ ನಡುವೆ ಯಾವುದೇ ವಿವಾದ ಇಲ್ಲದ ಕಾರಣಗಳು ಐದು ದಶಕಗಳ ಹಿಂದೆ ಹುಟ್ಟಿದ ವಿವಾದಕ್ಕೆ ಅಂತ್ಯ ಹಾಡುವುದೇ ಒಳ್ಳೆಯದು. ಹಾಗಾಗಿ ಏಕಸದಸ್ಯಪೀಠ ತೆಗೆದುಕೊಂಡಿದ್ದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಹಿಂದೂ ಸಂಘಟನೆ ಪರ ಜಗದೀಶ್ ಬಾಳಿಗಾ ವಾದ ಮಂಡಿಸಿದ್ದರು.
ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಆದೇಶಿಸಿತ್ತು. ಅದನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಪ್ರಕರಣವನ್ನು ಸರ್ಕಾರಕ್ಕೆ ಹಿಂದಿರುಗಿಸಿತ್ತು. ಹಾಗೆಯೇ, ಪ್ರಕರಣದ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ನೀಡಿರುವ ವರದಿ ಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಹೊಸದಾಗಿ ಪರಿಗಣಿಸಬೇಕು ಎಂದು 2021ರ ಸೆ.28ರಂದು ನಿರ್ದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ಗೌಸ್ ಮೊಹಿದ್ದೀನ್ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ:ಸ್ಮಾರ್ಟ್​ ಟ್ರ್ಯಾಪ್​: ಪ್ರಶಾಂತ್ ಮಾಡಾಳ್​ಗೆ ದೂರುದಾರ ಬಲೆ ಹೆಣೆದಿದ್ದು ಹೇಗೆ?
ಮೇಲ್ಮನವಿಯು 2022ರ ಆ.22ರಂದು ವಿಚಾರಣೆಗೆ ಬಂದ ವೇಳೆ, ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಸಂಪ್ರದಾಯಗಳದಂತೆ ಪೂಜಾ ವಿಧಿ ವಿಧಾನ ನೆರವೇರಿಸುವುದಕ್ಕೆ ಅವಕಾಶ ಕಲ್ಪಿಸಲು 2022ರ ಜು.1ರಂದು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ದತ್ತಾತ್ರೇಯ ಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಮತ್ತು ಅರ್ಚಕರನ್ನು ನೇಮಿಸಿ 2022ರ ಜು.19ರಂದು ಆದೇಶಿಸಲಾಗಿದೆ. ಹಾಗೆಯೇ, ಪೂಜಾ ಕೈಂಕರ್ಯಗಳ ಮೇಲೆ ನಿಗಾ ವಹಿಸಲು ಎಲ್ಲ ಧರ್ಮದವರು ಒಳಗೊಂಡ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eight =
Remember me
