ಬೆಂಗಳೂರು:ಮತದಾನಕ್ಕೆ ಪ್ರೋತ್ಸಾಹ ನೀಡುವಂತೆ ಕೋರಿ ಐಟಿ-ಬಿಟಿ, ಪ್ರಮುಖ ಸಂಸ್ಥೆಗಳಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದರು.
ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದ ಉದ್ದೇಶಿಸಿ ಮಾತನಾಡಿದ ಅವರು, ಐಟಿ,ಬಿಟಿ ಕಂಪನಿಗಳ ಸಿಬ್ಬಂದಿಗೆ ರಜೆ ನೀಡಿ, ಮತದಾನಕ್ಕೆ ಪ್ರೋತ್ಸಾಹ ನೀಡುವಂತೆ ಕೋರಲಾಗುವುದು ಎಂದರು.
ರಾಜ್ಯದ ಸರಾಸರಿ ಮತದಾನಕ್ಕಿಂತ ಕಡಿಮೆ ಮತದಾನವಾಗಿರುವ ಕ್ಷೇತ್ರಗಳಲ್ಲಿ ಮನೆ ಮನೆಗೆ ತೆರಳಿ ಮತದಾನದ ಬಗ್ಗೆ ಜಾಗೃತಿ ಮೂಡಿಲಾಗುತ್ತಿದೆ ಎಂದು ಹೇಳಿದರು.
ಏ.20 ರಿಂದ ಬೆಸ್ಕಾಂ, ಬೆಂಗಳೂರು ಜಲಮಂಡಳಿಯಿಂದ ಮತದಾರಿಗೆ ಸಂದೇಶ ರವಾನಿಸಲಾಗುವುದು. ಹಾಲಿನ ಪಾಕೆಟ್ ಮೇಲೆಯೂ ಮತದಾನದ ಜಾಗೃತಿ ಸಂದೇಶ ಮುದ್ರಿಸಲಾಗುತ್ತದೆ ಎಂದರು.
2019ರಲ್ಲಿ 43 ವಿಧಾನ ಸಭಾ ಕ್ಷೇತ್ರಗಳ 5 ಸಾವಿರ ಮತಗಟ್ಟೆಗಳಲ್ಲಿ ಕಡಿಮೆ ಮತದಾನವಾಗಿತ್ತು. ಈ ಮತಗಟ್ಟೆಗಳಲ್ಲಿ ಮನೆ ಮನೆಗೆ ತೆರಳಿ ಮತದಾನ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಿಗೆ ತೆರಳುವವರು ತಮ್ಮ ಜತೆ ಹಣ ಕೊಂಡೊಯ್ಯುವುದು ಸಾಮಾನ್ಯ. ಅವರಿಗೆ ವಿನಾಕಾರಣ ತೊಂದರೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮನೋಜ್‌ಕುಮಾರ್ ಮೀನಾ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್, ಕೂರ್ಮಾ ರಾವ್, ಮಾಧ್ಯಮ ವಿಶೇಷಾಧಿಕಾರಿ ಎ.ವಿ. ಸೂರ್ಯಸೇನ್, ಪ್ರೆಸ್ ಕ್ಷಬ್ ಅಧ್ಯಕ್ಷ ಆರ್. ಶ್ರೀಧರ, ಪ್ರಧಾನ ಕಾರ್ಯದರ್ಶಿ ಬಿ.ಪಿ. ಮಲ್ಲಪ್ಪ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 11 =
Remember me
