ಬೆಂಗಳೂರು:ಮತಗಟ್ಟೆ ಮಟ್ಟದಲ್ಲಿ ಪಕ್ಷದ ಏಜೆಂಟರುಗಳ ಮುಖಾಂತರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಹಕರಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು.
ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಡೆದ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಅನುಸರಿಸಬೇಕಾದ ವಿಷಯಗಳ ಕುರಿತು ರಾಷ್ಟ್ರ ಹಾಗೂ ರಾಜ್ಯ ಮಟ್ಟದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಉದ್ದೇಶಿಸಿ ಮಾತನಾಡಿದರು.
ತಳಮಟ್ಟದಲ್ಲಿ ಮತದಾರರ ಮಾಹಿತಿಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಚೆನ್ನಾಗಿ ಅರಿತಿರುತ್ತಾರೆ. ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಮತದಾರರ ಗುರುತಿನ ಚೀಟಿಗಳಲ್ಲಿ ಸಮಸ್ಯೆಗಳಿದ್ದಲ್ಲಿ, ವಿಳಾಸ ಬದಲಾದಲ್ಲಿ ಅಥವಾ ಹೊಸದಾಗಿ ಸೇರಿಸುವುದು ಸೇರಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಈಗ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡಲ್ಲಿ ಚುನಾವಣಾ ಸಮಯದಲ್ಲಿ ಸಮಸ್ಯೆಗಳು ಉದ್ಭವಿಸುವುದಿಲ್ಲ. ಈ ಸಮಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಚುನಾವಣೆಯಲ್ಲಿ ಆಯೋಗ ಹಲವು ಆಪ್‌ಗಳನ್ನು ಅಭಿವೃದ್ಧಿಪಡಿಸಿದ್ದು ಅದರಲ್ಲೂ ಮುಖ್ಯವಾಗಿ ವೋಟರ್ ಹೆಲ್ಪ್ ಲೈನ್ ಆಪ್ ಮತದಾರರ ಸ್ನೇಹಿಯಾಗಿದ್ದು, ಮತದಾರರು ಕುಳಿತಲ್ಲಿಯೇ ತಮ್ಮ ಹೆಸರನ್ನು ಪರಿಶೀಲಿಸಬಹುದು, ಸೇರಿಸಬಹುದು ಮತ್ತು ವಿಳಾಸ ಬದಲಾಯಿಸಬಹುದಾಗಿದೆ. ಅದೇ ರೀತಿಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಯಲು ಸಿ-ವಿಜಿಲ್ ಆಪ್ ಅತ್ಯಂತ ಪರಿಣಾಮಕಾರಿಯಾಗಿದ್ದು, ಸಾರ್ವಜನಿಕರು ತಮ್ಮ ಐಡೆಂಟಿಟಿಯನ್ನು ಬಿಟ್ಟುಕೊಡದೆ ಆಯೋಗಕ್ಕೆ ಸಾಕ್ಷಿ ಸಮೇತ ದೂರು ಸಲ್ಲಿಸಬಹುದು. ದಿವ್ಯಾಂಗರಿಗಾಗಿ ಸಕ್ಷಮ್ ಆಪ್ ಅಭಿವೃದ್ಧಿ ಪಡಿಸಲಾಗಿದ್ದು, ಅವರು ತಮಗೆ ಬೇಕಾದ ವಾಹನ ಅಥವಾ ಇತರೆ ಸೌಲಭ್ಯಗಳನ್ನು ಆಪ್ ಮೂಲಕ ಬುಕ್ ಮಾಡಬಹುದಾಗಿದೆ ಎಂದು ತಿಳಿಸಿದರು.
ಚುನಾವಣೆ ಸಂಬಂಧಿತ ಯಾವುದೇ ಪ್ರಶ್ನೆಗಳಿಗಾಗಿ ಮತದಾರರ ಸಹಾಯವಾಣಿ 1950 ಗೆ ಉಚಿತವಾಗಿ ಕರೆ ಮಾಡುವ ಮೂಲಕ ಉತ್ತರ ಪಡೆದುಕೊಳ್ಳಬಹುದಾಗಿದೆ ಎಂದು ಮನೋಜ್ ಕುಮಾರ್ ಮೀನಾ ಹೇಳಿದರು.ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪಕ್ಷಗಳ ಪ್ರತಿನಿದಿಗಳು ತಮ್ಮಅಭಿಪ್ರಾಯ, ಸಲಹೆಗಳನ್ನು ನೀಡಿದರು.ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್ ಹಾಗೂ ಕೂರ್ಮಾ ರಾವ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × three =
Remember me
