ಬೆಂಗಳೂರು:ಕಾವೇರಿ, ಮಹದಾಯಿ, ಕೃಷ್ಣಾ ಮತ್ತಿತರ ಜಲವಿವಾದ, ರಾಜ್ಯದ ಅಣೆಕಟ್ಟೆಗಳಲ್ಲಿ ನೀರಿನ ಸ್ಥಿತಿಗತಿ ಕುರಿತು ರ್ಚಚಿಸಲು ಬುಧವಾರ (ಆ.23) ಸರ್ವಪಕ್ಷಗಳ ಸಭೆ ನಡೆಯಲಿದೆ.
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧ ಪಕ್ಷಗಳು, ರೈತ ಸಂಘಟನೆಗಳು ಅಸ್ತ್ರವಾಗಿ ಬಳಸಿಕೊಳ್ಳುವುದರ ಮುನ್ಸೂಚನೆ ಅರಿತ ಸರ್ಕಾರ, ಸರ್ವಪಕ್ಷ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದುಕೊಳ್ಳಲು ನಿರ್ಧರಿಸಿದೆ.
ಸರ್ವಪಕ್ಷ ಸಭೆ ಕರೆಯಲಾಗಿದೆ. ಎಲ್ಲರ ಅಭಿಪ್ರಾಯ ಪಡೆಯಲಾಗುವುದು. ಕಾನೂನು ಹೋರಾಟ ಹೇಗೆ ಮಾಡಬೇಕೆಂಬುದರ ಬಗ್ಗೆ ಅಡ್ವೋಕೇಟ್ ಜನರಲ್ ಅವರಿಗೆ ಬಿಟ್ಟಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ತಿಳಿಸಿದ್ದಾರೆ. ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆ ಬಿದ್ದಿಲ್ಲ.
ಹೀಗಾಗಿ ರಾಜ್ಯ ಹಾಗೂ ರೈತರ ಹಿತ ಕಾಯುವುದು ನಮ್ಮ ಕರ್ತವ್ಯ. ರಾಜ್ಯದಲ್ಲಿನ ಆಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು, ಈ ವಿಚಾರವಾಗಿ ನಾವು ಸರ್ವಪಕ್ಷ ಸಭೆ ಕರೆದಿದ್ದೇವೆ. ಸೋಮವಾರ ಸುಪ್ರೀಂಕೋರ್ಟ್​ನಲ್ಲಿ ಮನವಿ ಸಲ್ಲಿಸುತ್ತಿದ್ದೇವೆ. ಈಗಾಗಲೇ ನೀರು ಹರಿಸುವ ನಿರ್ಧಾರ ಮರುಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡಿದ್ದೇವೆ. ನಾವು ರೈತರ ಹಿತವನ್ನು ಕಾಯಬೇಕು. ಕೋರ್ಟ್ ನಿರ್ಧಾರವನ್ನೂ ಪಾಲಿಸಬೇಕು ಎಂದರು.
ಬಿಜೆಪಿ ಹಾಗೂ ದಳದ ಸ್ನೇಹಿತರು ಈ ವಿಚಾರದಲ್ಲಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅವರಿಗೆ ತಮ್ಮ ಕಾಲದಲ್ಲಿ ಏನಾಗಿತ್ತು ಎಂಬ ಅರಿವಿಲ್ಲವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದೇ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಹೇಳಿದರು.
ಸೋಮವಾರ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ತಡೆದು ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, ಅದು ಅವರದೇ ರಸ್ತೆ ಅಲ್ಲವೇ, ಅಲ್ಲಿ ಅನೇಕ ಜೀವಗಳು ಬಲಿಯಾಗಿವೆ. ಅವರು ಹೋರಾಟ ಮಾಡಲಿ ಎಂದು ವ್ಯಂಗ್ಯವಾಡಿದರು.
ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದರೆ ಸಚಿವರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಲಾಗುವುದು. ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾವೇರಿ ಭಾಗದ ರೈತರ ಪಾಲಿಗೆ ಮರಣ ಶಾಸನ ಬರೆಯಲು ಮುಂದಾಗಿದ್ದಾರೆ.
| ಕುರುಬೂರು ಶಾಂತಕುಮಾರ್, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ
ಕೆಆರ್​ಎಸ್ ನೀರಿನ ಮಟ್ಟ 6 ಅಡಿ ಕುಸಿತ:ಆರು ದಿನಗಳಿಂದ ಕೆಆರ್​ಎಸ್ ಜಲಾಶಯದಿಂದ 15,373 ಕ್ಯೂಸೆಕ್​ನಷ್ಟು ನೀರು ಹೊರಬಿಡಲಾಗುತ್ತಿದೆ. ನಾಲೆಗಳು ಮತ್ತು ಕುಡಿಯುವ ಉದ್ದೇಶಕ್ಕಾಗಿ 3000 ಕ್ಯೂಸೆಕ್, ಇನ್ನುಳಿದ ನೀರು ತಮಿಳುನಾಡಿಗೆ ಹರಿಯುತ್ತಿದೆ. ಇದರಿಂದ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 6 ಅಡಿಗಳಷ್ಟು ಕಡಿಮೆಯಾಗಿ ಪ್ರಸ್ತುತ 106 ಅಡಿಗೆ ಇಳಿದಿದೆ. ಕಳೆದ ವರ್ಷ ಈ ಅವಧಿಯಲ್ಲಿ 124 ಅಡಿ ನೀರಿತ್ತು.
ಮತ್ತೊಂದು ಗಡಿ ಮೀರಿದ ಪ್ರೇಮ: ಭಾರತೀಯ ಪ್ರೇಮಿಗಾಗಿ ದೇಶ ಬಿಟ್ಟು ಬಂದ ಪ್ರೇಯಸಿ!

ಚಂದ್ರನಿಂದ ಬಂದ ಮೊದಲ ಚಿತ್ರ ಎಂದು ‘ಚಾಯ್​ವಾಲಾ’ನ ಫೋಟೋ ಹಂಚಿಕೊಂಡ ನಟ ಪ್ರಕಾಶ್ ರಾಜ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − ten =
Remember me
