ಬೆಂಗಳೂರು:2005 ಏಪ್ರಿಲ್ 1ರ ನಂತರ ಕೇಂದ್ರ ಸರ್ಕಾರ ಮತ್ತು ಗಣಿ ಕಂಪನಿಗಳಿಂದ ಖನಿಜ ಸಮೃದ್ಧ ಭೂಮಿ ಮೇಲಿನ ರಾಯಧನದ ಹಿಂದಿನ ಬಾಕಿಯನ್ನು ವಸೂಲಿ ಮಾಡಲು ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಅನುಮತಿ ನೀಡಿರುವುದು ಕರ್ನಾಟಕದ ಪಾಲಿಗೆ ವರದಾನವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.
ಕೇಂದ್ರ ಮತ್ತು ಗಣಿ ಕಂಪನಿಗಳು ಮುಂದಿನ 12 ವರ್ಷಗಳಲ್ಲಿ ವ್ಯವಸ್ಥಿತ ರೀತಿಯಲ್ಲಿ ಖನಿಜ ಸಮೃದ್ಧ ರಾಜ್ಯಗಳಿಗೆ ಬಾಕಿ ಪಾವತಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ. ಇದರಿಂದ ರಾಜ್ಯಕ್ಕೆ ಭಾರಿ ಮೊತ್ತದ ಬಾಕಿ ರಾಯಧನ ಸಿಗಲಿದ್ದು, ಈ ಬಾಕಿ ಹಣವನ್ನು ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯ ಪ್ರವೃತ್ತರಾಗಬೇಕು ಎಂದು ಮನವಿ ಮಾಡಿದ್ದಾರೆ.
ಉಚ್ಛ ನ್ಯಾಯಾಲಯದ ಮಹತ್ವದ ತೀರ್ಪಿನ ನಂತರ ಜಾರ್ಖಂಡ್‌ಗೆ 1.36 ಲಕ್ಷ ಕೋಟಿ ರೂಪಾಯಿ ಬಾಕಿ ಬರಲಿದೆ. ಈ ಹಣದಲ್ಲಿ ಜಾರ್ಖಂಡ್ ಅಭಿವೃದ್ಧಿ ಹಾಗೂ ರಾಜ್ಯದ ಕಲ್ಯಾಣಕ್ಕೆ ವಿನಿಯೋಗಿಸುವುದಗಿ ಅಲ್ಲಿನ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದ್ದಾರೆ. ಇದೇ ಮಾದರಿಯಲ್ಲಿ ಕರ್ನಾಟಕದ ಪಾಲಿಗೆ ಬರಬೇಕಿರುವ ಮೊತ್ತವನ್ನು ಕೇಂದ್ರದಿಂದ ಪಡೆಯಬೇಕು. ಈ ನಿಟ್ಟಿನಲ್ಲಿ ಒತ್ತಡ ಹೇರಬೇಕು ಎಂದು ಪತ್ರದ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಮ್ಮ ಮನವಿ ಗೌರವಪೂರ್ವಕವಾಗಿ ಸ್ವೀಕರಿಸುತ್ತೀರಿ, ನಮ್ಮ ಆಶಯದಂತೆ ಕೇಂದ್ರದಿಂದ ಬಾಕಿ ರಾಯಧನ ಪಡೆಯುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತೀರಿ ಎಂಬ ವಿಶ್ವಾಸವನ್ನು ಹೊಂದಿದ್ದೇವೆ ಎಂದು ಪತ್ರದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 12 =
Remember me
