ಬೆಂಗಳೂರು;ಸಹಕಾರ ಬ್ಯಾಂಕುಗಳು ಪ್ರಸಕ್ತ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕೂಡಲೇ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ಸಹಕಾರ ಬ್ಯಾಂಕುಗಳ ಪರವಾಗಿ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಆರ್.ವೆಂಕಟೇಶ್ ಮತ್ತು ಸಹಕಾರ ಮಹಾಮಂಡಲದ ನಿರ್ದೇಶಕರಾದ ರುದ್ರೇಗೌಡ ಹಾಗೂ ವೆಂಕಟರಾಮರೆಡ್ಡಿರವರು ಸಹಕಾರ ಸಚಿವ ಎಚ್.ಕೆ.ಪಾಟೀಲರಿಗೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಲದ ಸಭಾಂಗಣದಲ್ಲಿ ಸಹಕಾರ ಸಚಿವ ಎಚ್.ಕೆ. ಪಾಟೀಲರ ನೇತೃತ್ವದಲ್ಲಿ ನಡೆದ ರಾಜ್ಯದ ಪ್ರಮುಖ ಬ್ಯಾಂಕುಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸಹಕಾರ ಬ್ಯಾಂಕುಗಳ ಅಧ್ಯಕ್ಷರ ನಿಯೋಗ ಮನವಿ ಸಲ್ಲಿಸಿದೆ.
ಆದ್ಯತಾವಲಯದ ಸಾಲಗಳ ಮಿತಿಯ ಪರಿಷ್ಕರಣೆ, ಗೃಹ ಸಾಲಗಳ ನಿಗದಿತ ಮಿತಿಯನ್ನು ಹೆಚ್ಚಿಸುವುದು, ನಾಮಿನಲ್ ಸದಸ್ಯರ ಸಾಲದ ಮಿತಿಯನ್ನು ಒಂದು ಲಕ್ಷದಿಂದ ಐದು ಲಕ್ಷಕ್ಕೆ ಹೆಚ್ಚಿಸುವುದು, ಚಿನ್ನಾಭರಣ ಸಾಲಗಳನ್ನು ನೀಡುವ ಸಂದರ್ಭದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಅನುಸರಿಸುವ ಮಾನದಂಡವನ್ನೇ ಸಹಕಾರ ಬ್ಯಾಂಕುಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಮನವಿ ಮಾಡಲಾಯಿತು. ಇಂತಹ ಹಲವು ಸಮಸ್ಯೆಗಳನ್ನು ತ್ವರಿತವಾಗಿ ನಿವಾರಣೆ ಮಾಡಿದಲ್ಲಿ ಸಹಕಾರ ಬ್ಯಾಂಕುಗಳ ಸುಲಲಿತ ವ್ಯವಹಾರಕ್ಕೆ ಬಲ ಬರಲಿದೆ ಎಂದು ಸಭೆಯಲ್ಲಿ ಹಾಜರಿದ್ದ ವಿವಿಧ ಬ್ಯಾಂಕುಗಳ ಅಧ್ಯಕ್ಷರು ಅಭಿಪ್ರಾಯಪಟ್ಟಿದ್ದಾರೆ.
ಸಭೆಯಲ್ಲಿ ನ್ಯಾಷನಲ್ ಅರ್ಬನ್ ಕೋ ಆಪರೇಟಿವ್ ಫೈನಾನ್ಸ್ ಆ್ಯಂಡ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಅಧ್ಯಕ್ಷ ಜ್ಯೋತಿಂದ್ರ ಮೆಹತಾ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಕೃಷ್ಣ ಪಾಲ್ಗೊಂಡಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + 5 =
Remember me
