ಬೆಂಗಳೂರುಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2,500 ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಮಿಕ್ಕುಳಿದ ವೃಂದದ 2,286 ಹುದ್ದೆಗಳು ಮತ್ತು ಸ್ಥಳೀಯ ವೃಂದದ 214 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ದ್ವಿತೀಯ ಪಿಯುಸಿ, 12ನೇ ತರಗತಿ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೊಮೊ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪುರುಷರು 160 ಸೆಂ.ಮೀ. ಮತ್ತು ಮಹಿಳೆಯು 150 ಸೆಂ.ಮೀ ದೇಹದಾರ್ಢ್ಯತೆ ಹೊಂದಿರುವವರು ಅರ್ಜಿಸಲ್ಲಿಸಬಹುದು. ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಕನಿಷ್ಠ ಶೇ.30 ಅಂಕಗಳನ್ನು ಪಡೆದಿರುವವರು ಮಾತ್ರ ಆಯ್ಕೆ ಪರಿಶೀಲನೆಗೆ ಪರಿಗಣಿಸಲಾಗುವುದು.ಸಾಮಾನ್ಯ ವರ್ಗ 35, ಒಬಿಸಿ 38, ಪರಿಶಿಷ್ಟ ಜಾತಿ/ಪಂಗಡ 40 ಮತ್ತು ಮಾಜಿ ಸೈನಿಕರು, ಇಲಾಖೆ ಅಭ್ಯರ್ಥಿಗಳು 45 ವರ್ಷಗಳ ವಯೋಮಿತಿ ನಿಗದಿ ಮಾಡಿದೆ.
ಮಾ.10ರಿಂದ ಏ.10ರೊಳಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು ಏ.13 ಕೊನೆಯ ದಿನವಾಗಿದೆ. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 750 ರೂ. ಮತ್ತು ಪರಿಶಿಷ್ಟ ಜಾತಿ/ಪಂಗಡ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ ಠಿಠಿ://ಛಿ.ಚ್ಟ.್ಞಜ್ಚಿ.ಜ್ಞಿ ಗೆ ಭೇಟಿ ನೀಡಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − one =
Remember me
