ಬೆಂಗಳೂರು:ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪಯೋಜನೆ ಅಡಿಯಲ್ಲಿ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನಕ್ಕಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕರ್ನಾಟಕದ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಆಯಾ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೆಪ್ಟೆಂಬರ್ 6 ರೊಳಗಾಗಿ ಸಲ್ಲಿಸಬೇಕು.
ಅರ್ಜಿಗಳನ್ನು ನೇರವಾಗಿ ಕೇಂದ್ರ ಕಛೇರಿಯಲ್ಲಿ ಸ್ವೀಕರಿಸಲಾಗುವುದಿಲ್ಲ ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು/ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 + twenty =
Remember me
