ಬೆಂಗಳೂರು:ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆಯು ಸೂಚನೆ ನೀಡಿದ್ದು, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.
ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಿ ನೇಮಕಾತಿ ಮಾಡಿಕೊಳ್ಳುವಂತೆ ತಿಳಿಸಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ವೆಬ್‌ಸೈಟ್ dce.karnataka.gov.in ಸಂಪರ್ಕಿಸಬಹುದು.
ಆಸಕ್ತರು ಆ.25ರಿಂದ ಸೆ.2ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆ.4- ರಾಜ್ಯವ್ಯಾಪ್ತಿ ಮೆರಿಟ್ ಪಟ್ಟಿ ಪ್ರಕಟಿಸುವುದು, ಸೆ.8- ತಾತ್ಕಾಲಿಕ ಕಾರ್ಯಭಾರ ಹಾಗೂ ಕೌನ್ಸೆಲಿಂಗ್ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಸೆ.11-ರಿಂದ 15 ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಕೌನ್ಸೆಲಿಂಗ್, ಸೆ.16- ಕೌನ್ಸೆಲಿಂಗ್‌ನಲ್ಲಿ ಕಾಲೇಜು ಆಯ್ಕೆ ಕೌನ್ಸೆಲಿಂಗ್ ನಡೆಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಬೇಕು.
2 ವರ್ಷಗಳ ಸ್ನಾತಕೋತ್ತರ ಪದವಿ, ಪಿಎಚ್.ಡಿ., ನೆಟ್/ಸ್ಲೆಟ್, ಹಿಂದಿನ ವರ್ಷಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.
ಕಲಾ/ವಾಣಿಜ್ಯ/ಭಾಷಾ ವಿಷಯಗಳಿಗೆ ಗರಿಷ್ಠ 15 ಮತ್ತು ವಿಜ್ಞಾನ/ಪ್ರಾಯೋಗಿಕ ತರಗತಿಗಳನ್ನು ಒಳಗೊಂಡಿರುವ ತರಗತಿಗಳಿಗೆ 19 ತರಗತಿಗಳ ಕಾರ್ಯಭಾರ ಹಂಚಿಕೆ ಮಾಡಬೇಕು. ಕೌನ್ಸೆಲಿಂಗ್‌ನಲ್ಲಿ ಭಾಗವಹಿಸದ ಅಭ್ಯರ್ಥಿಗಳಿಗೆ 2ನೇ ಬಾರಿಗೆ ಅವಕಾಶ ನೀಡುವುದು ಬೇಡವೆಂದು ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
