ಬೆಂಗಳೂರು:ಶಾಲಾ ಶಿಕ್ಷಣ ಇಲಾಖೆಯು ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 10 ವರ್ಷಗಳ ತೃಪ್ತಿದಾಯಕ ಸೇವೆ ಸಲ್ಲಿಸಿರುವ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ:ವಿರೋಧ ಪಕ್ಷಗಳ ಸಭೆ ಲೋಕಸಭೆ ಚುಣಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಜು.31ರ ವರೆಗೆ ಶಿಕ್ಷಣ ಇಲಾಖೆ ವೆಬ್‌ಸೈಟ್http://www.schooleducation.kar.nic.inನಲ್ಲಿ ಸಲ್ಲಿಸಬಹುದು.
ಶಿಕ್ಷಕರ ವೈಯಕ್ತಿಕ, ಶೈಕ್ಷಣಿಕ ಮತ್ತು ವಿವಿಧ ಕ್ಷೇತ್ರದಲ್ಲಿನ ಸಾಧನೆಗಳನ್ನು ಒಳಗೊಂಡ ಸಮಗ್ರ ಮಾಹಿತಿಯನ್ನು ಕಳೆದ 5 ವರ್ಷಗಳ ಅಂಕಿ-ಅಂಶಗಳನ್ನು ಸಲ್ಲಿಸಬೇಕು. ಈಗಾಗಲೇ ಒಂದು ಬಾರಿ ಪ್ರಶಸ್ತಿ ಪಡೆದಿರುವವರು ಹಾಗೂ ಗಂಭೀರ ಆರೋಪ, ಇಲಾಖೆ ವಿಚಾರಣೆ, ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರು ಆರ್ಹರಾಗಿರುವುದಿಲ್ಲ ಎಂದು ಶಾಲಾ ಶಿಕ್ಷಣ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 8 =
Remember me
