ಬೆಂಗಳೂರು:ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್​ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಜೂನ್ 1ರಿಂದ 30ವರೆಗೆ ಕರೆಯಲಾಗಿದ್ದ ಅರ್ಜಿ ಆಹ್ವಾನ ಆದೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ.
2020-21ನೇ ಸಾಲಿನಲ್ಲಿ ಕರೆಯಲಾಗಿದ್ದ ಪಿಎಸ್​ಐ (ಸಿವಿಲ್) 431 ಮತ್ತು ಕಲ್ಯಾಣ ಕರ್ನಾಟಕ- 125 ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಜೂ.1ರಿಂದ 30 ವರೆಗೆ ಅರ್ಜಿ ಸಹ ಅಹ್ವಾನಿಸಲಾಗಿತ್ತು. ಆಡಳಿತಾತ್ಮಕ ಕಾರಣಗಳಿಂದಾಗಿ ಅರ್ಜಿ ಆಹ್ವಾನ ದಿನಾಂಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪಾಲ್ ತಿಳಿಸಿದ್ದಾರೆ.
ಇತ್ತೀಚೆಗೆ ಪಿಎಸ್​ಐ ಹುದ್ದೆಗಳ ಆಕಾಂಕ್ಷಿಗಳ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 28ರಿಂದ 30ಕ್ಕೆ ಮತ್ತು ಎಸ್​ಸಿ-ಎಸ್​ಟಿಗೆ 30ರಿಂದ 32 ವರ್ಷಕ್ಕೆ ಹೆಚ್ಚಿಸಲಾಗಿತ್ತು. ಇದಕ್ಕೂ ಮೊದಲೇ ಪಿಎಸ್​ಐಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದ ಪರಿಣಾಮ ವಯೋಮಿತಿ ಸಡಿಲಿಕೆ ಅನ್ವಯ ಆಗುತ್ತಿರಲಿಲ್ಲ. ಅದಕ್ಕಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಕೋವಿಡ್-19 ಲಾಕ್​ಡೌನ್ ಜೂ.30ರ ವರೆಗೆ ವಿಸ್ತರಣೆಗೊಂಡ ಪರಿಣಾಮ ಅರ್ಜಿ ಆಹ್ವಾನ ದಿನಾಂಕ ರದ್ದು ಮಾಡಲಾಗಿದೆ ಎನ್ನಲಾಗಿದೆ.
ಜೂ.1ರಿಂದ ಅಂತರ ರಾಜ್ಯ ಸಂಚಾರ ಮುಕ್ತ, ಮುಕ್ತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 20 =
Remember me
