ಬೆಂಗಳೂರು:ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ನಡೆಸುತ್ತಿರುವ ಉಚಿತ ವಿದ್ಯಾರ್ಥಿನಿಲಯಕ್ಕೆ 2024-25ನೇ ಸಾಲಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ನಗರ ಹೊರತುಪಡಿಸಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬಂದು ಬೆಂಗಳೂರಿನ ವಿವಿಧ ಕಾಲೇಜುಗಳಲ್ಲಿ ಅಭ್ಯಾಸ ಮಾಡುವ ಬಡ, ಪ್ರತಿಭಾವಂತ ವೀರಶೈವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಅಧೀನದಲ್ಲಿ ನಡೆಯುತ್ತಿರುವ ನಾಗರಭಾವಿಯ ಎಂ.ಬಸವಯ್ಯ ಕಾಲೇಜಿನಲ್ಲಿ ಪಿಯುಸಿ ಕಾಮರ್ಸ್ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು, ಯಾವುದೇ ಕಾಲೇಜಿನಲ್ಲಿ ಡಿಪ್ಲೊಮಾ, ಪದವಿ ತರಗತಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಮೇ31ರೊಳಗೆ ಅರ್ಜಿ ಪಡೆದು, ಜೂ.5ರೊಳಗೆ ಅರ್ಜಿ ಸಲ್ಲಿಸಬೇಕು.
ವೈದ್ಯಕೀಯ, ತಾಂತ್ರಿಕ, ಸ್ನಾತಕೋತ್ತರ, 5 ವರ್ಷದ ಎಲ್‌ಎಲ್‌ಬಿ, ನರ್ಸಿಂಗ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಜೂ.30ರೊಳಗೆ ಅರ್ಜಿ ಪಡೆದು, ಜು.5ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ದೊರೆಯುವ ವಿಳಾಸ : ಕಾರ್ಯದರ್ಶಿಗಳು, ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ, ಎಸ್‌ಜೆಎಂ ಟವರ್ಸ್‌, ನಂ.18/1, ಕಲ್ಯಾಣ ಸಮುಚ್ಛಯ, 2ನೇ ಮಹಡಿ, 6ನೇ ಅಡ್ಡರಸ್ತೆ, ಗಾಂಧಿನಗರ, ಬೆಂಗಳೂರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 17 =
Remember me
