ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್​​ಲೈನ್ ಅರ್ಜಿ ಆಹ್ವಾನಿಸಲಾಗಿದೆ.10 ಕಾರ್ಯಕರ್ತೆ ಹಾಗೂ 66 ಸಹಾಯಕಿ ಹುದ್ದೆಗಳಿವೆ. ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು.  ಮಾಸಿಕ ಗೌರವ ಧನ 10,000 ರೂ. ಇರುತ್ತದೆ. ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ಪಾಸಾಗಿರಬೇಕು ಹಾಗೂ 9 ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. ಮಾಸಿಕ ಗೌರವ ಧನ 5 ಸಾವಿರ ರೂ. ಇರುತ್ತದೆ.
ಇದನ್ನೂ ಓದಿ:ನಕಲಿ ಇನ್ಸ್ಟಾಗ್ರಾಂ ಖಾತೆಯ ಮೂಲಕ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆನ್​ಲೈನ್ ಪೀಡಕನಿಗಾಯ್ತು ತಕ್ಕ ಶಾಸ್ತಿ
ವಯೋಮಿತಿ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ಪೂರೈಸಿರಬೇಕು. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 30ರೊಳಗೆ ಅರ್ಜಿ ಸಲ್ಲಿಸಬಹುದು. ಆನ್​ಲೈನ್ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ https://anganwadirecruit.kar.nic.in ವೆಬ್​ಸೈಟ್ ಸಂಪರ್ಕಿಸಬಹುದು.
ಪತಿ ಮೇಲೆ ಹಲ್ಲೆ ನಡೆಸಿದ ಪೊಲೀಸ್​​ಗೆ ಮಹಿಳೆ ಕಪಾಳಮೋಕ್ಷ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + sixteen =
Remember me
