ಬೆಂಗಳೂರು:ಐದು ವರ್ಷಗಳ ಚುನಾಯಿತ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅಜಿರ್ಯನ್ನು ಹೈಕೋರ್ಟ್​ ವಜಾಗೊಳಿಸಿದೆ.
ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳ 5 ವರ್ಷದ ಅವಧಿ 2020ರ ಜೂನ್​ ಬಳಿಕ ವಿವಿಧ ದಿನಾಂಕಗಳಂದು ಪೂರ್ಣಗೊಳ್ಳುತ್ತದೆ. ಅವಧಿ ಪೂರ್ಣಗೊಂಡ ಗ್ರಾಪಂಗೆ ಆಡಳಿತಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಪ್ರಧಾನ ಕಾರ್ಯದರ್ಶಿ 2020ರ ಜೂನ್​ 17ರಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಚಳ್ಳಕೆರೆ ತಾಲೂಕು ಸೋಮಗುದ್ದಿ ಗ್ರಾಪಂ ಅಧ್ಯಕ್ಷ ಸಿ.ಎಲ್​.ಸತೀಶ್​ ಬಾಬು ಸೇರಿ 16 ಮಂದಿ ತಕರಾರು ಅರ್ಜಿ ಸಲ್ಲಿಸಿದ್ದರು. ಇದನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್​. ದೀಕ್ಷಿತ್​ ಅವರಿದ್ದ ಪೀಠ, ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದೆ.ಇದನ್ನೂ ಓದಿರಿವಿಡಿಯೋ ಗೇಮ್ ಆಡ್ಬೇಡ ಅಂದ್ರೂ ಕೇಳದೆ ಸಾವಿಗೆ ಶರಣಾದ ಹೈಸ್ಕೂಲ್​ ವಿದ್ಯಾರ್ಥಿ
ಕರ್ನಾಟಕ ಗ್ರಾಮ ಸ್ವರಾಜ್​ ಮತ್ತು ಪಂಚಾಯತ್​ ರಾಜ್​ ಕಾಯ್ದೆಯ ಸೆಕ್ಷನ್​ 8ರ ಅನುಸಾರ ಆಡಳಿತಾಧಿಕಾರಿ ನೇಮಿಸಲು ಮುಂದಾಗಿರುವ ಪಂಚಾಯಿತಿಗಳ ಅವಧಿ​ ಈಗಾಗಲೇ ಮುಗಿದಿದೆ. ಸೆಕ್ಷನ್​ 8( 4)ರ ಅನುಸಾರ ಒಂದು ಬಾರಿ ಗ್ರಾಪಂಗೆ ಆಡಳಿತಾಧಿಕಾರಿ ನೇಮಕ ಮಾಡಲು ಅವಕಾಶವಿದೆ. ಕೋವಿಡ್​ ಸೋಂಕಿರುವ ಕಾರಣ ಜನಸಾಮಾನ್ಯರ ಕುಂದುಕೊರತೆಗಳಿಗೆ ಸ್ಪಂದಿಸಲು ಆಡಳಿತಾಧಿಕಾರಿಗಳಿಗೆ ಸಾಧ್ಯವಾಗುವುದಿಲ್ಲ. ಆದ್ದರಿಂದ, ಮುಂದಿನ ಚುನಾಯಿತ ಪ್ರತಿನಿಧಿಗಳ ಆಯ್ಕೆ ಆಗುವವರೆಗೆ ತಮ್ಮನ್ನೇ ಮುಂದುವರಿಸಬೇಕು ಎಂಬ ಅಜಿರ್ದಾರರ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿರಿಬೆಂಗಳೂರಲ್ಲಿ ಪೊಲೀಸರಿಗೂ ಸಿಕ್ತಿಲ್ಲ ಟ್ರೀಟ್ಮೆಂಟ್! ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಮುಖ್ಯಪೇದೆ ಬಲಿ
ಕಾಯ್ದೆಯ ಸೆಕ್ಷನ್​ 9ರ ಅನುಸಾರ ಪಂಚಾಯಿತಿಗೆ ಚುನಾಯಿತರಾದವರ ಅವಧಿ 5 ವರ್ಷ ಮಾತ್ರ. ಅವಧಿ ಪೂರ್ಣಗೊಂಡ ನಂತರ ಚುನಾಯಿತ ಪ್ರತಿನಿಧಿ ಮುಂದುವರಿಯುವುದನ್ನು ಸಂವಿಧಾನದ ಪರಿಚ್ಛೇದ 243-ಉ ನಿರ್ಬಂಧಿಸುತ್ತದೆ. ಅದಕ್ಕೆ ತದ್ವಿರುದ್ಧವಾಗಿ ಅವಧಿ ಪೂರ್ಣಗೊಂಡ ನಂತರವೂ ಅವರನ್ನು ಮುಂದುವರಿಕೆಗೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ತನ್ನ ತೀರ್ಪಿನಲ್ಲಿ ವಿವರಿಸಿದೆ.
ಕರ್ನಾಟಕ ಗ್ರಾಮ ಸ್ವರಾಜ್​ ಮತ್ತು ಪಂಚಾಯತ್​ ರಾಜ್​ ಅಧಿನಿಯಮ-1993ರ ನಿಯಮ 41 ಮತ್ತು 42ರಂತೆ ಅವಧಿ ಪೂರ್ಣಗೊಂಡಿರುವ ಗ್ರಾಪಂಗೆ ಆಡಳಿತಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಪ್ರಧಾನ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ ಹೊರತು, ಸೂಚನೆ ನೀಡಿಲ್ಲ.​ ಆದ್ದರಿಂದ, ಸರ್ಕಾರದ ಕ್ರಮದಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು​ ತಿಳಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ.
ಇಡೀ ರಾಜ್ಯ ಮತ್ತೆ ಸ್ತಬ್ಧ! ವೀಕೆಂಡ್​ ಲಾಕ್​ಡೌನ್​ಗೆ ಕ್ಷಣಗಣನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + thirteen =
Remember me
