ಬೆಂಗಳೂರು:ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಕಾರ್ಯಾಧ್ಯಕ್ಷರಾಗಿ ಹನುಮಂತಪ್ಪ ಅಲ್ಕೋಡ್, ಸಿ.ಬಿ.ಸುರೇಶ್ ಬಾಬು, ಭೀಮನಗೌಡ ಬಸನಗೌಡ ಪಾಟೀಲ, ಸಾ.ರಾ.ಮಹೇಶ್, ದೊಡ್ಡಪ್ಪಗೌಡ ಶಿವಲಿಂಗಪ್ಪಗೌಡ ನರೆಬೋಳ್, ಹಿರಿಯ ಉಪಾಧ್ಯಕ್ಷರಾಗಿ ಡಾ.ಶ್ರೀನಿವಾಸಮೂರ್ತಿ, ರವೀಂದ್ರ ಶ್ರೀಕಂಠಯ್ಯ, ಸೋಮಣ್ಣಗೌಡ ಪಾಟೀಲ್, ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ನೇಮಕ ಮಾಡಲಾಗಿದೆ.
ಉಪಾಧ್ಯಕ್ಷರು: ಕೆ.ಎಂ.ತಿಮ್ಮರಾಯಪ್ಪ, ರಾಜಾ ವೆಂಕಟಪ್ಪ ನಾಯಕದೊರೆ, ಕರೆಮ್ಮಜಿ.ನಾಯಕ್, ಚೌಡರೆಡ್ಡಿ ತೂಪಲ್ಲಿ, ಸುನತೀ ಚವ್ಹಾಣ್, ಕೆ.ಬಿ.ಪ್ರಸನ್ನಕುಮಾರ್, ಟಿ.ಎ.ಶರವಣ.ಮಹಾ ಪ್ರಧಾನ ಕಾರ್ಯದರ್ಶಿ: ವೆಂಕಟರಾವ್ ನಾಡಗೌಡ.ಖಜಾಂಚಿ: ಬಿ.ಎನ್.ರವಿಕುಮಾರ್.ಪ್ರಧಾನ ಕಾರ್ಯದರ್ಶಿಗಳು: ಎ.ಪಿ.ರಂಗನಾಥ್, ಆರ್. ಪ್ರಕಾಶ್, ಡಾ.ಸೈಯದ್ ರೋಷನ್ ಅಬ್ಬಾಸ್, ರೆಹಮತುಲ್ಲಾಖಾನ್, ಸುಧಾಕರ್ ಲಾಲ್, ಶಿವಕುಮಾರ್ ನಾಟೇಕರ್, ಶಾರದಾ ಅಪ್ಪಾಜಿಗೌಡ, ರೂತ್ ಮನೋರಮ, ಮಲ್ಲೇಶಬಾಬು, ವೀರಭದ್ರಪ್ಪ ಹಾಲಹರವಿ.ಕಾರ್ಯದರ್ಶಿಗಳು: ಮಹಾಂತಯ್ಯಮಠ, ಶಂಸಿ ತಬ್ರಾಜ್, ಐಲಿನ್ ಜಾನ್ ಮಠಪತಿ, ಬಿ.ಕಾಂತರಾಜ್, ಡಾ.ವಿಜಯಕುಮಾರ್, ಡಾ.ಶೀಲಾ ನಾಯಕ್, ರೋಷನ್ ಬಾವಾಜಿ, ಚಂದ್ರಕಾಂತ್ ಶೇಕಾ, ಕನ್ಯಕುಮಾರಿ ಮತ್ತು ಸಿದ್ದಬಸಪ್ಪ ಯಾದವ್.
ಐದು ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಮೂರು ವಿಭಾಗಗಳಿಗೆ ರಾಜ್ಯಾಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರನ್ನು ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ, ರಶ್ಮಿ ರಾಮೇಗೌಡ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರು, ರಾಜು ನಾಯಕ ಯುವ ಜನತಾದಳದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಆಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಣದಲ್ಲಿರುವ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರ ಗೆಲುವಿಗೆ ಶ್ರಮಿಸಲು ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಇ.ಕೃಷ್ಣಪ್ಪ, ಬೆಂಗಳೂರು ನಗರದ ಮಾಜಿ ಅಧ್ಯಕ್ಷ ಆರ್.ಪ್ರಕಾಶ್ ಅವರಿಗೆ ಉಸ್ತುವಾರಿ ನೀಡಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಜೆ.ಪಿ. ಭವನದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ಸೇರಿದಂತೆ ಸರಣಿ ಸಭೆ ನಡೆಸಿದರು. ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.
ಜೆಡಿಎಸ್ ಸೇರಿದ ವಿಶ್ರಾಂತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಕ್ಷಕ್ಕೆ ಬರಮಾಡಿಕೊಂಡರು. ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ಮಾಜಿ ಅಧ್ಯಕ್ಷರಾದ ಎಚ್.ಕೆ. ಕುಮಾರಸ್ವಾಮಿ, ಶಾಸಕ ನೇಮಿರಾಜ್ ನಾಯಕ್, ಮಾಜಿ ಸಚಿವ ಅನಿಲ್ ಲಾಡ್ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × two =
Remember me
