ಬೆಂಗಳೂರು:ಹೊಸ ಪಿಂಚಣಿ ಯೋಜನೆ(ಎನ್​ಪಿಎಸ್​) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ(ಒಪಿಎಸ್​) ಜಾರಿಗೆ ತರಲು ಸೂಕ್ತ ನಿರ್ಣಯ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘ ಅರಮನೆ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ “ನಮ್ಮಭಿಮಾನದ ಅಭಿನಂದನೆ’ ಸಮಾರಂಭದಲ್ಲಿ ಮಾತನಾಡಿದರು. ಒಪಿಎಸ್​ ಜಾರಿಗೆ ಸಂಬಂಧಪಟ್ಟಂತೆ ಅಧ್ಯಯನ ನಡೆಸಲು ಈಗಾಗಲೇ ಸಮಿತಿ ರಚಿಸಲಾಗಿದೆ. ಅದಷ್ಟೂ ಬೇಗ ವರದಿ ನೀಡುವಂತೆ ಸೂಚಿಸಲಾಗಿದೆ. ಸರ್ಕಾರಕ್ಕೆ ಸಮಿತಿ ವರದಿ ನೀಡಿದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಈ ಬಗ್ಗೆ ಈಗಾಗಲೇ ಅದೇಶ ಹೊರಡಿಸಲಾಗಿದೆ. ಪದವೀಧರ ಶಿಕ್ಷಕರ ವೇತನ ಸಮಸ್ಯೆ ಮತ್ತು ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಇದು ನನ್ನ ಗಮನಕ್ಕೆ ಬಂದಿದ್ದು, ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗುವುದು. ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿಗೂ ಕ್ರಮವಹಿಸಲಾಗುವುದು ಎಂದು ಸಿಎಂ ಹೇಳಿದರು.
ಅಂಬೇಡ್ಕರ್​, ಗಾಂಧಿ, ಬಸವಾದಿ ಶರಣರು ಸಮಸಮಾಜದ ಕನಸು ಕಂಡಿದ್ದರು. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಮ್ಮಲ್ಲರ ಮೇಲಿದೆ. ಕೆಲ ಕಾರಣಗಳಿಂದ ಉಂಟಾಗಿರುವ ಸಾಮಾಜಿಕ,ಆರ್ಥಿಕ ಅಸಮತೋಲನ ನಿವಾರಿಸಿ ಸಮ ಸಮಾಜ ನಿರ್ಮಿಸಬೇಕು.ಸರ್ಕಾರ ಜಾರಿ ಮಾಡುವ ಯೋಜನೆಗಳು ಮತ್ತು ಕಾರ್ಯಕ್ರಮಗಳು ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ತಲುಪಿಸಿದಾಗ ಮಾತ್ರ ನಮ್ಮಲ್ಲರ ಶ್ರಮ ಸಾರ್ಥಕವಾಗಲಿದೆ. ಹೀಗಾಗಿ, ನಾವೆಲ್ಲರೂ ಸೇರಿ ಸ್ವಾಸ್ಥ$್ಯ ಸಮಾಜ ರೂಪಿಸಬೇಕಿದೆ ಎಂದು ಸಲಹೆ ನೀಡಿದರು. ಸಿಎಂ ರಾಜಕೀಯ ಕಾರ್ಯದರ್ಶಿರಾದ ಗೋವಿಂದರಾಜು, ನಸೀರ್​ ಅಹ್ಮದ್​, ಎಂಎಲ್ಸಿ ಪ್ರಕಾಶ್​ ರಾಥೋಡ್​, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀನ್​, ಅಪರ ಮುಖ್ಯ ಕಾರ್ಯದರ್ಶಿ ಎಲ್​.ಕೆ. ಅತೀಕ್​, ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂದ ಅಧ್ಯಕ್ಷ ಎ.ಅಮೃತ್​ರಾಜ್​ ಸೇರಿ 50 ಸಾವಿರಕ್ಕೂ ಅಧಿಕ ನೌಕರರಿದ್ದರು.
ಹೊರೆಯಾದರೂ ನೌಕರರ ಪರ ಇದ್ದೇವೆ4ನೇ ವೇತನ ಆಯೋಗದ ಜಾರಿಗೊಳಿಸುವಾಗ ಜೆ.ಎಚ್​.ಪಟೇಲ್​ ಸಂಪುಟದಲ್ಲಿ ನಾನು ಹಣಕಾಸು ಸಚಿವನಾಗಿದ್ದೆ.2018ರಲ್ಲಿ 6ನೇ ವೇತನ ಆಯೋಗ, 2024ರಲ್ಲಿ 7ನೇ ವೇತನ ಆಯೋಗ ಜಾರಿ ಮಾಡಿದ್ದೇನೆ. 6ನೇ ವೇತನ ಆಯೋಗ ಜಾರಿಗೆ 10,500 ಕೋಟಿ ರೂ., 7ನೇ ವೇತನ ಆಯೋಗ ಅನುಷ್ಠಾನಕ್ಕೆ 20 ಸಾವಿರ ಕೋಟಿ ರೂ.ಸರ್ಕಾರಕ್ಕೆ ಆರ್ಥಿಕ ಹೊರೆಯಾಗಬಹುದು.ಆದರೂ, ಇದು ಹೊರೆಯಲ್ಲ. ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರುವ ಮೂಲಕ ಎಂದಿಗೂ ನಮ್ಮ ಸರ್ಕಾರಿ ನೌಕರರ ಪರವಾಗಿ ಇದೆ ಎಂದು ಸಿಎಂ ವಿವರಿಸಿದರು. ಸರ್ಕಾರಿ ನೌಕರರು ತಮ್ಮ ಬೇಡಿಕೆಗಳನ್ನು ಮಂಡಿಸುತ್ತಲ್ಲೇ ಜನರ ಪರವಾಗಿ ಕೆಲಸ ಮಾಡಬೇಕು. ನಾವು, ನೀವು ಸೇರಿದರೆ ಮಾತ್ರ ಒಳ್ಳೆಯ ಸರ್ಕಾರವಾಗಲಿದೆ. ಜನರು ಕಟ್ಟುವ ತರಿಗೆ ಹಣವನ್ನು ದುರ್ಬಲ ವರ್ಗದವರ ಅಭಿವೃದ್ಧಿಗೆ ವಿನಿಯೋಗಿಸಿದರೆ ನಮ್ಮ ಬದುಕು ಸಾರ್ಥಕವಾಗಲಿದೆ ಎಂದರು.
ಪ್ರಾಸಿಕ್ಯೂಷನ್​ಗೆ ಆದೇಶ; ನಾನಲ್ಲ ರಾಜ್ಯಪಾಲರೇ ರಾಜೀನಾಮೆ ಕೊಡಬೇಕು: ಸಿಎಂ ಸಿದ್ದರಾಮಯ್ಯ
ಕ್ಷಮೆ ಕೇಳಿದ ಸಿಎಂ:ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು, ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬಳಿಕ, ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದರು. ಕಾರ್ಯಕ್ರಮಕ್ಕೆ ಒಂದೂ ಮುಕ್ಕಾಲು ಗಂಟೆ ತಡವಾಗಿ ಬಂದಿದ್ದಕ್ಕೆ ಸಭಿಕರ ಬಳಿ ಸಿಎಂ ಕ್ಷಮೆ ಕೇಳಿದರು.
ಸಮಿತಿ ಪುನರಚನೆ:ರಾಷ್ಟ್ರೀಯ ಪಿಂಚಣಿ ಯೋಜನೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಯನ್ನು ಪುನರ್​ ರಚಿಸಲಾಗಿದೆ. ಐಎಎಸ್​ ಅಧಿಕಾರಿ ಅಂಜುಂ ಪರ್ವೇಜ್​ ಸಮಿತಿ ಅಧ್ಯಕ್ಷರಾಗಿ, ರಿತೇಶ್​ ಕುಮಾರ್​ ಸಿಂಗ್​, ಅಮಲಾನ್​ ಆದಿತ್ಯ ಬಿಸ್ವಾಸ್​, ಡಾ.ಆರ್​.ವಿಶಾಲ್​ ಸದಸ್ಯರಾಗಿ ಮತ್ತು ಡಾ.ಎಂ.ಟಿ.ರೇಜು ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಹಳೆಯ ಪಿಂಚಣಿ ಮರು ಜಾರಿ ಮಾಡಿರುವ ರಾಜ್ಯಗಳಿಗೆ ತೆರಳಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಭದ್ರತಾ ವೈಫಲ್ಯರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅರಮನೆ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ “ನಮ್ಮಭಿಮಾನದ ಅಭಿನಂದನೆ’ ಸಮಾರಂಭದಲ್ಲಿ ಭದ್ರತಾ ವೈಫಲ್ಯ ನಡೆಯಿತು. ಭಾಷಣ ಮುಗಿಸಿ ವೇದಿಕೆಯ ಅಸನದಲ್ಲಿ ಸಿಎಂ ಸಿದ್ದರಾಮಯ್ಯ ಕುಳಿತುಕೊಂಡಿದ್ದಾಗ ಓರ್ವ ಯುವಕನೊಬ್ಬ ವೇದಿಕೆ ಮುಂಭಾಗದಿಂದ ಓಡಾಡಿ ಒಂದು ಶಾಲು ಹೊದಿಸಲು ಪ್ರಯತ್ನಿಸಿದ್ದಾನೆ. ಕೂಡಲೇ ಪೊಲೀಸರು, ಅಕ್ಕಪಕ್ಕದವರು ಆತನನ್ನು ತಡೆದರು. ಅದಷ್ಠವಶಾತ್​ ಯಾವುದೇ ಟನೆ ಸಂಭವಿಸಲಿಲ್ಲ. ವೇದಿಕೆ ಮೇಲೆ ನುಗ್ಗಿದ್ದ ಯುವಕ ಸರ್ಕಾರಿ ನೌಕರರನಲ್ಲ ಎಂದು ತಿಳಿದುಬಂದಿದೆ. ಯುವಕನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ಸರ್ಕಾರವು ರೂಪಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರಬೇಕೆಂದರೆ ಅಧಿಕಾರಿಗಳ ಪಾತ್ರ ಮಹತ್ವದ್ದು. ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಮಸ್ಯೆ ಈಡೇರಿಸಲು ಸಾಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇಲಾಖೆಯಲ್ಲಿರುವ ಸಮಸ್ಯೆ ಪರಿಹರಿಸಲು ಮುಂದಾಗಿದ್ದೇವೆ.| ಮಧು ಬಂಗಾರಪ್ಪ. ಶಿಕ್ಷಣ ಸಚಿವ.
ಸರ್ಕಾರಿ ನೌಕರರ ಸಂದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಅದಷ್ಟೂ ಬೇಗ ಹಳೆ ಪಿಂಚಣಿ ಯೋಜನೆ ಜಾರಿಗೆ ಬಂದರೆ ಲಾಂತರ ನೌಕರರಿಗೆ ಅನುಕೂಲವಾಗಲಿದೆ. 7ನೇ ವೇತನ ಆಯೋಗವನ್ನು ಜಾರಿಗೆ ಮಾಡಿದ್ದಕ್ಕಾಗಿ ಸಿಎಂ ಸಿದ್ದರಾಮಯ್ಯನವರಿಗೆ ಕೃತಜ್ಞತೆ ಸಲ್ಲಿಸಲಾಗಿದೆ. ಆರೋಗ್ಯ ಸಂಜೀವಿನಿ ಯೋಜನೆ ಕಾರ್ಯರೂಪಕ್ಕೆ ತರಲು ಸರ್ಕಾರ ಸ್ಪಂದಿಸಿದೆ.|ಸಿ.ಎಸ್​.ಷಡಾಕ್ಷರಿ. ಅಧ್ಯಕ್ಷ, ರಾಜ್ಯ ಸರ್ಕಾರಿ ನೌಕರರ ಸಂಘ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 1 =
Remember me
