ಬೆಂಗಳೂರು:ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ, ಉದ್ಯಮಗಳ ಆಕರ್ಷಣೆ ಮೂಲಕ ಉದ್ಯೋಗ ಸೃಷ್ಟಿಸಲು ಸರ್ಕಾರ ಒತ್ತಾಸೆ ನೀಡಿದ್ದು, ಪೂರಕವಾಗಿ ಉದ್ಯಮಿಗಳು ಸ್ಪಂದಿಸುತ್ತಿದ್ದಾರೆ. ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ಉತ್ತೇಜನ ನೀಡಿ ಉದ್ಯೋಗಗಳ ಸೃಷ್ಟಿಗೆ ಒತ್ತು ನೀಡಿರುವ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು 81 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದೆ. ಒಟ್ಟು 2,689.51 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ 6,825 ಉದ್ಯೋಗಗಳ ಸೃಜನೆ ಅಂದಾಜಿಸಲಾಗಿದೆ. ಅನುಮತಿ ನೀಡಿದ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕರ್ನಾಟಕ ಉದ್ಯೋಗಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ ನಿರಾಣಿ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಏಕಗವಾಕ್ಷಿ ತೀರುವಳಿ ಸಮಿತಿ ಸಭೆ ಗುರುವಾರ ನಡೆಯಿತು. ಸಮಿತಿಯು 50 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯ ಏಳು ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ ಯೋಜನೆಗಳನ್ನು ಪರಿಗಣಿಸಿ ಅಸ್ತು ಎಂದಿದ್ದು, 1,229.43 ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 1,734 ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ನಿರಾಣಿ ತಿಳಿಸಿದ್ದಾರೆ. ಅಲ್ಲದೆ, 15 ಕೋಟಿ ರೂ.ಗಿಂತ ಹೆಚ್ಚು ಹಾಗೂ 50 ಕೋಟಿ ರೂ.ಗಿಂತ ಕಡಿಮೆ ಹೂಡಿಕೆಯ 71 ಹೊಸ ಯೋಜನೆಗಳಿಗೆ ಅನುಮತಿ ನೀಡಿದ್ದು, 1,308.06 ಕೋಟಿ ರೂ. ಮೊತ್ತದ ಯೋಜನೆಗಳಡಿ 5,091 ಜನರಿಗೆ ಉದ್ಯೋಗಾವಕಾಶ ಲಭಿಸಲಿದೆ. 151.42 ಕೋಟಿ ರೂ. ಹೂಡಿಕೆಯ ಮೂರು ಯೋಜನೆಗಳು ಅನುಮೋದನೆ ಪಡೆದಿವೆ ಎಂದವರು ಹೇಳಿದ್ದಾರೆ. ಏಪ್ರಿಲ್ ಅಂತ್ಯಕ್ಕೆ ನಡೆದ ಸಭೆಯಲ್ಲಿ 60 ಕೈಗಾರಿಕಾ ಯೋಜನೆಗಳಿಗೆ ಅನುಮತಿ ನೀಡಿದ್ದು, ಒಟ್ಟು 2,465.94 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ 8,575 ಉದ್ಯೋಗಗಳ ಸೃಜನೆ ಅಂದಾಜಿಸಲಾಗಿದೆ.
https://www.vijayavani.net/father-got-his-job-back-because-of-his-daughter/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + seventeen =
Remember me
