ಅರ್ಹರಲ್ಲದವರುಪಡೆದಿದ್ದ ಬಿಪಿಎಲ್ ಕಾರ್ಡ್​ಗಳನ್ನು ದಂಡ ರಹಿತವಾಗಿ ಹಿಂದಿರುಗಿಸಲು ಏ.30 ಕೊನೆಯ ದಿವನಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್​ನ ಎಚ್.ಡಿ.ರೇವಣ್ಣ ಪರವಾಗಿ ಎ.ಟಿ.ರಾಮಸ್ವಾಮಿ ಹಾಗೂ ಬಿಜೆಪಿಯ ಅರಗ ಜ್ಞಾನೇಂದ್ರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಿಗದಿತ ದಿನಾಂಕದ ಒಳಗೆ ಸ್ವಯಂ ಪ್ರೇರಿತರಾಗಿ ಕಾರ್ಡ್ ಹಿಂತಿರುಗಿಸಿದರೆ ದಂಡ ವಸೂಲು ಮಾಡುವುದಿಲ್ಲ. ಶಿಕ್ಷೆಗೆ ಗುರಿಯಾಗುವುದು ಕೂಡ ತಪ್ಪುತ್ತದೆ. ಒಂದೊಮ್ಮೆ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಅನರ್ಹರು ಪಡಿತರ ಚೀಟಿ ಪಡೆದುಕೊಂಡಿರುವುದನ್ನು ಪತ್ತೆ ಮಾಡಿದರೆ ದಂಡ ವಿಧಿಸುವುದು ಕಡ್ಡಾಯ ಎಂದರು.
ಇದುವರೆಗೂ 63 ಸಾವಿರ ಮಂದಿ ಬಿಪಿಎಲ್ ಕಾರ್ಡ್ ಹಿಂದಿರುಗಿಸಿದ್ದು, 96 ಲಕ್ಷ ರೂ. ದಂಡ ವಸೂಲು ಮಾಡಲಾಗಿದೆ. ಬಹುತೇಕರು ತಾವೇ ದಂಡ ಪಾವತಿಸಿರು ವುದರಿಂದ ಹಿಂದಿರುಗಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಾಸನ ಜಿಲ್ಲೆಯಲ್ಲಿ ಇನ್ನು 20 ದಿನದಲ್ಲಿ ಅರ್ಹರಿಗೆ ಪಡಿತರಚೀಟಿ ನೀಡಲು ಸೂಚನೆ ನೀಡಲಾಗಿದೆ ಎಂದರು. ಬಿಜೆಪಿಯ ಪಿ.ರಾಜೀವ್​ರ ಮತ್ತೊಂದು ಪ್ರಶ್ನೆಗೆ ಉತ್ತರಿಸಿ ಸಚಿವರು, ಬಡವರಿಗೆ ನೀಡುವ ಪಡಿತರ ತೂಕದಲ್ಲಿ ಮೋಸ ಮಾಡುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಗ್ರಾಮೀಣಾಭಿವೃದ್ಧಿ ಇಲಾಖೆ ಅನುದಾನವನ್ನು ಅಕ್ರಮವಾಗಿ ಬ್ಯಾಂಕ್​ಗಳಲ್ಲಿ ಠೇವಣಿ ಇಟ್ಟ ಪ್ರಕರಣ: ತನಿಖೆಗೆ ಸದನ ಸಮಿತಿ ರಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − nine =
Remember me
