ದಾವಣಗೆರೆ:ಗ್ರಾಮ ಪಂಚಾಯಿತಿ ಚುನಾವಣೆ ಮತದಾನ ನಡೆದ ರಾತ್ರಿಯೇ ಹೃದಯಾಘಾತದಿಂದ ಸಾವಿಗೀಡಾದ ಅಭ್ಯರ್ಥಿಯೇ ಗೆಲವು ಸಾಧಿಸಿದ್ದಾರೆ. ಇಂದು ಮತ ಎಣಿಕೆ ನಡೆದಿದ್ದು, ಗೆಲುವು ಮೃತ ಅಭ್ಯರ್ಥಿಯದ್ದೇ ಆಗಿದೆ. ಆದರೆ ಗೆಲುವನ್ನ ಸಂಭ್ರಮ ಇದೀಗ ಅವರೇ ಇಲ್ಲ!
ಇಂತಹ ಘಟನೆ ಹೊನ್ನಾಳಿ ತಾಲೂಕಿನ ಅರಬಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಕದಕಟ್ಟ ಗ್ರಾಮದಲ್ಲಿ ಸಂಭವಿಸಿದೆ. ಚುನಾವಣೆಗೆ ಸ್ಪರ್ಧಿಸಿದ್ದ ಡಿ.ಬಸಪ್ಪ(72) ಮೃತಪಟ್ಟಿದ್ದು, ಇವರೇ ಗೆಲುವು ಸಾಧಿಸಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 5 ಬಾರಿ‌ ಗೆಲುವು ಸಾಧಿಸಿ 6ನೇ ಬಾರಿ ಅದೃಷ್ಟ ಪರೀಕ್ಷೆಗೆ ಬಸಪ್ಪ, ಮತದಾನದ ದಿನ ಬೆಳಗಿನಿಂದ ಸಂಜೆವರೆಗೂ ಮತಗಟ್ಟೆ ಬಳಿಯೇ ಇದ್ದರು. ಅಂದು ಸಂಜೆ ಹೊನ್ನಾಳಿಗೆ ಹೋಗಿ ರಾತ್ರಿ ಗ್ರಾಮಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ವಾಂತಿ, ಎದೆನೋವಿನಿಂದ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮತದಾನ ಪೂರ್ಣಗೊಂಡು ಫಲಿತಾಂಶ ಪ್ರಕಟವಾಗುವ ಮುನ್ನವೇ ಇಹಲೋಕ ಯಾತ್ರೆ ಪೂರ್ಣಗೊಳಿಸಿದ್ದ ಅವರಿಗೆ ಚುನಾವಣೆಯಲ್ಲಿ ಗೆಲುವು ಸಿಕ್ಕಿದೆಯಾದರೂ ಸಂಭ್ರಮಿಸಿಸಲು ಅವರೇ ಇಲ್ಲ. ಮೃತರಿಗೆ ಪತ್ನಿ, ಮೂವರು ಪುತ್ರರು. ಬಸಪ್ಪ ಅವರ ಸ್ಥಾನ ಉಪಚುನಾವಣೆ ನಡೆಯಲಿದೆ.
ಇಂತಹದ್ದೇ ಮತ್ತೊಂದು ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಸಂಭವಿಸಿದೆ. ಈ ಪಂಚಾಯಿತಿಗೆ ಡಿ.22 ರಂದು ಮತದಾನ ನಡೆದಿತ್ತು. ಚುನಾವಣೆಗೆ ಸ್ಪರ್ಧಿಸಿದ್ದ ಸಿ.ಬಿ. ಅಂಬೋಜಿ ಅವರು ಡಿ.27ರಂದು ಮೃತಪಟ್ಟಿದ್ದರು. ಫಲಿತಾಂಶದಲ್ಲಿ ಅವರು ಗೆಲುವು ಸಾಧಿಸಿದ್ದಾರೆ. ಈಗ ಈ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದೆ.
ಗ್ರಾಪಂ ಚುನಾವಣೆ: ಈ ಕ್ಷೇತ್ರಕ್ಕೆ 26 ವರ್ಷದ ಬಳಿಕ ಮತದಾನ, ಮಂಗಳಮುಖಿ ಗೆಲುವು

ಗ್ರಾಪಂ ಚುನಾವಣೆಯಲ್ಲಿ ಗೆದ್ದರೂ ಸಂಭ್ರಮಿಸಲು ಅಭ್ಯರ್ಥಿಯೇ ಬದುಕಿಲ್ಲ!

ಚಿಕ್ಕಪ್ಪ v/s ಮಗ, ಅಣ್ಣ v/s ತಮ್ಮ, ಅತ್ತೆ v/s ಸೊಸೆ: ಭಾರಿ ಕುತೂಹಲ ಮೂಡಿಸಿದ್ದ ಫಲಿತಾಂಶ ಇಲ್ಲಿದೆ

ನವ ವಿವಾಹಿತೆಯನ್ನು ಕೊಂದು ಮನೆಯಲ್ಲೇ ಹೂತಿಟ್ಟ! 15 ದಿನದ ಬಳಿಕ ಬಯಲಾಯ್ತು ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
