ಬೆಂಗಳೂರು:‘ಭೂತಾನ್ ರಾಷ್ಟ್ರದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ನಮ್ಮ ರೈತರಿಗೆ ಯಾವುದೇ ಸಮಸ್ಯೆ ಇಲ್ಲ. ರಾಜಕೀಯ ಲಾಭ ಪಡೆಯಲು ಕೆಲವರು ಗುಲ್ಲೆಬ್ಬಿಸುತ್ತಿದ್ದಾರೆ’ ಎಂದು ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದರು
‘ಭೂತಾನ್ ಚೀನಾ ಪಕ್ಕದಲ್ಲಿ ಇರುವ ಪುಟ್ಟ ರಾಷ್ಟ್ರ. ಈ ಹಿಂದೆ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಅನುಮತಿ ನೀಡಲಾಗಿತ್ತು. ಅದರಲ್ಲಿ ಶೇಕಡಾ 12ರಷ್ಟು ಅಡಿಕೆಯನ್ನು ಒಣಗಿಸಲಾಗುತ್ತದೆ. ಭೂತಾನ್ ಜತೆ ನಾವು ಉತ್ತಮ ಸಂಬಂಧ ಇಟ್ಟಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ’ ಎಂದು ಅರಗ ಜ್ಞಾನೇಂದ್ರ ಮಾಹಿತಿ ನೀಡಿದರು.
‘ಒಣ ಅಡಿಕೆ ಮತ್ತು ಅದರ ಉಪ ಉತ್ಪನ್ನಗಳನ್ನು ಅಲ್ಲಿಗೆ ರಪ್ತು ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ’ ಎಂದ ಅರಗ ಜ್ಞಾನೇಂದ್ರ, ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 18 =
Remember me
