ಬೆಂಗಳೂರು:‘ನಮ್ಮ ಭಾಗದ ಜನರು ಸುಟ್ಟು ಕರಕಲಾಗಿರುತ್ತಾರೆ, ಖರ್ಗೆ ಅವರನ್ನು ನೋಡಿದರೆ ಇದು ಗೊತ್ತಾಗುತ್ತದೆ’ಎಂದು ಹೇಳುವ ಮೂಲಕ ಆರಗ ಜ್ಞಾನೇಂದ್ರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮತ್ತು ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಲ್ಯಾಣ ಕರ್ನಾಟಕದ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.
ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ತಾವು ಯಾವುದೇ ಹಂತದಲ್ಲೂ ಹೇಳಿಲ್ಲ. ತಿರುಚಿದ ಹೇಳಿಕೆಗೆ ನಾನು ಸ್ಪಷ್ಟೀಕರಣ ಕೊಟ್ಟರೂ ಬಿಜೆಪಿ ರಾಜಕೀಯ ದುರ್ಲಾಭಕ್ಕಾಗಿ ಪ್ರತಿಭಟನೆ ನಡೆಸಿರುವುದು ಅರ್ಥಹೀನ ಎಂದು ಹೇಳಿದ್ದಾರೆ.
ಆರಗ ಜ್ಞಾನೇಂದ್ರ ಅವರು ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ, ನೆರಳಿಲ್ಲ ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ ನಾಡಿನ ಜನತೆಗೆ ಅವಮಾನ ಮಾಡಿರುವುದು ನಿಜಕ್ಕೂ ದುರ್ದೈವ ಎಂದು ತಿಳಿಸಿದ್ದಾರೆ.
ಆರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ತಮಗಷ್ಟೇ ಅಲ್ಲದೆ ಇಡೀ ಕಲ್ಯಾಣ ಕರ್ನಾಟಕದ ಜನತೆಯ ಬೇಷರತ್ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ.
ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಇದೆ. ಜತೆಗೆ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇತ್ತು. ಆಗ ಇವರು ಏಕೆ ಕಸ್ತೂರಿ ರಂಗನ್ ವರದಿ ರದ್ದು ಮಾಡಲಿಲ್ಲ ಎಂದು ಪ್ರಶ್ನಿಸಿರುವ ಈಶ್ವರ ಖಂಡ್ರೆ, ಈಗಲೂ ಮಲೆನಾಡಿನ ಮತ್ತು ಕರಾವಳಿಯ ಬಿಜೆಪಿ ಶಾಸಕರು, ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಕಸ್ತೂರಿ ರಂಗನ್ ವರದಿಯನ್ನು ರದ್ದುಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಕೇಂದ್ರ ಸರ್ಕಾರವೇ ಈಗ ನಿವೃತ್ತ ಐಎ್ಎಸ್ ಅಧಿಕಾರಿ ಸಂಜಯ್ ಕುಮಾರ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಎಲ್ಲ ಪಶ್ಚಿಮ ಘಟ್ಟದ ರಾಜ್ಯಗಳಿಗೆ ಅಧ್ಯಯನಕ್ಕೆ ಕಳಿಸಿದೆ. ವರದಿ ಜಾರಿಗೆ ಪಟ್ಟು ಹಿಡಿದಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + twelve =
Remember me
