ಶಿವಮೊಗ್ಗ:ರಾಜ್ಯದಲ್ಲಿ ಗೋಹತ್ಯೆ ಕಾಯ್ದೆ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್​ ನಡುವೆ ಜಟಾಪಟಿ ಜೋರಾಗಿದೆ. ಎಮ್ಮೆ, ಕೋಣಗಳನ್ನ ಕಡಿಯಬಹುದು ಅನ್ನೋದಾದ್ರೆ ಹಸುಗಳನ್ನ ಏಕೆ ಕಡಿಯಬಾರದು ಎಂದು ಪಶಶು ಸಂಗೋಪನಾ ಸಚಿವ ವೆಂಕಟೇಶ್​ ಹೇಳಿಕೆ ನೀಡಿದ ಬೆನ್ನಲ್ಲೇ ಉಭಯ ಪಕ್ಷಗಳ ನಡುವೆ ವಾಕ್ಸಮರ ಜೋರಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವೆಂಕಟೇಶ್ ಅವರು ನಿನ್ನೆ ಆಡಿರುವ ಮಾತುಗಳು ಯಾರನ್ನು ಉದ್ದೇಶಿಸಿ ಹೇಳಿದ್ದು ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ. ಗೋವುಗಳನ್ನು ಕಡಿಯುವುದರಲ್ಲಿ ಸಾರ್ಥಕತೆ ಇಲ್ಲ. ಬದಲಿಗೆ ಅವುಗಳನ್ನು ಸಾಕುವುದರಲ್ಲಿ ಸಾರ್ಥಕತೆ ಇದೆ ಎಂದು ಹೇಳಿದ್ದಾರೆ.
ನಾವು ತಾಯಿಯ ಎದೆಹಾಲು ನಿಲ್ಲಿಸಿದ ಮೇಲೆಯೂ ಬದುಕಿರುವವರೆಗೂ ಹಸುವಿನ ಹಾಲನ್ನು ಕುಡಿಯುತ್ತೇವೆ. ಹೀಗಾಗಿಯೇ ಗೋವಿಗೆ ತಾಯಿ ಎಂದು ಕರೆಯುತ್ತೇವೆ. ಪಶು ಸಂಗೋಪನ ಇಲಾಖೆ ಸಚಿವ ವೆಂಕಟೇಶ್ ಅವರು ನಿನ್ನೆ ಆಡಿರುವ ಮಾತುಗಳು ಯಾರನ್ನು ಉದ್ದೇಶಿಸಿ ಹೇಳಿದ್ದು ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ ಎಂದು ಕಿಡಿಕಾರಿದ್ದಾರೆ.
ನಾವು ಆಹಾರ ಬೆಳೆ ಬೆಳೆಯಲು ವಿದೇಶಗಳಿಂದ ರಾಸಾಯನಿಕ ಗೊಬ್ಬರಗಳನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ. ಇದಕ್ಕಾಗಿ ಪ್ರತಿವರ್ಷ ಐದು ಲಕ್ಷ ಕೋಟಿ ರೂಪಾಯಿ ವ್ಯಯಿಸುತ್ತಿದ್ದೇವೆ. ರಾಸಾಯನಿಕ ಗೊಬ್ಬರ ತಂದು ನಮ್ಮ ಮಣ್ಣನ್ನು ಸಾಯಿಸುತ್ತೇವೆ ಹೀಗಾಗಿ ನಮ್ಮ ರೈತ ಸಾಯುತ್ತಿದ್ದಾನೆ.
ಇದನ್ನೂ ಓದಿ:ಇಬ್ಬರು ಬಾಲಕಿಯರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ನೆಲಕ್ಕೆಸೆದ ದತ್ತು ಕೇಂದ್ರದ ಮಹಿಳಾ ಸಿಬ್ಬಂದಿ
ಇತ್ತೀಚೆಗೆ ನಾವು ಸಾವಯವ ಕೃಷಿಯತ್ತ ವಾಲುತ್ತಿದ್ದೇವೆ ಇದಕ್ಕಾಗಿ ಜಾನುವಾರುಗಳು ಬೇಕೇ ಬೇಕು. ಇಂದು ಜಾನುವಾರು ಗೊಬ್ಬರಕ್ಕೆ ಬೆಲೆ ಎಷ್ಟಾಗಿದೆ ಎಂಬುದನ್ನು ಎಲ್ಲರೂ ಯೋಚನೆ ಮಾಡಲೇಬೇಕು. ಪಶು ಸಂಗೋಪನ ಸಚಿವರು ಕಟುಕರ ರೀತಿ ಮಾತನಾಡುವುದು ಸರಿಯಲ್ಲ. ಮೊದಲು ಅದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಪಶು ಸಂಗೋಪನಾ ಸಚಿವರು ಯಾರನ್ನು ತೃಪ್ತಿಪಡಿಸಬೇಕೆಂದು ಈ ರೀತಿ ಹೇಳಿಕೆ ನೀಡುತ್ತಿದ್ದಾರೆಂದು ಎಲ್ಲರಿಗೂ ಗೊತ್ತಿದೆ. ಇದು ತುಂಬಾ ದಿನ ನಡೆಯುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 8 =
Remember me
