ಬೆಂಗಳೂರು: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್ ಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಭಾನುವಾರ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಅರಸು ಪ್ರಶಸ್ತಿ ವಿತರಿಸಿ ಮಾತನಾಡಿದರು.
ಕನ್ನಡ ನೆಲ ಸಾಮಾಜಿಕ ನ್ಯಾಯವನ್ನು ಕ್ರಾಂತಿಕಾರಿಯಾಗಿ ಜಾರಿ ಮಾಡಿದ ಇತಿಹಾಸ ಹೊಂದಿದೆ. ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ದೇವರಾಜ ಅರಸು ಅವರ ವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗೆ ಇದೆ ಎಂದರು.
ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇರಬಾರದು ಎನ್ನುವ ಆಶಯ ಬಸವಣ್ಣನವರ ಕಾಲದಿಂದಲೂ ನೆಲೆಯೂರಿದೆ. ದೇವರಾಜ ಅರಸು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಬಿಜೆಪಿ ಬಂದ ಮೇಲೆ ಉಳ್ಳವನೇ ಭೂಮಿ ಒಡೆಯ ಎನ್ನುವಂತಾಗಿದೆ ಎಂದು ಟೀಕಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ , ಶಾಸಕರಾದ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − three =
Remember me
