ಬೆಂಗಳೂರು:ಈ ಕರೊನಾ ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತೆ, ನಮ್ಮ ಕೆಲಸ ಮತ್ತೆ ಯಾವಾಗ ಶುರುವಾಗುತ್ತೆ ಅನ್ನೋದು ಬಹುತೇಕ ಎಲ್ಲರ ತಲೆ ಕೊರೆಯುತ್ತಿರುವ ಪ್ರಶ್ನೆ. ಇದಕ್ಕೆ ಕೊನೆಗೂ ಉತ್ತರ ದೊರೆತಿದೆ.
ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು ವಿಜಯವಾಣಿ- ದಿಗ್ವಿಜಯ 24/7 ನ್ಯೂಸ್ ಗುರುವಾರ ಏರ್ಪಡಿಸಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಈ ಪ್ರಶ್ನೆಗೊಂದು ಸಮಾಧಾನಕರ ಉತ್ತರ ನೀಡಿದ್ದಾರೆ.
“ಇನ್ನು 2-3 ದಿನಗಳಲ್ಲಿ ಇಡೀ ರಾಜ್ಯದ ಬಹುತೇಕ ಪ್ರದೇಶಗಳು ಮೊದಲಿನಂತೆ ಸಹಜ ಸ್ಥಿತಿಗೆ ಬರಲಿವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಮೇ 3ರ ನಂತರವಾದರೂ ಮದ್ಯದಂಗಡಿ ಓಪನ್​ ಆಗುತ್ತಾ? ಸಿಎಂ ಏನು ಹೇಳ್ತಾರೆ?
ರಾಜ್ಯದ ನಾನಾ ಕಡೆಗಳಿಂದ ಬಂದ ನೂರಾರು ಕರೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, “ರಾಜ್ಯವನ್ನು ಆದಷ್ಟು ಬೇಗ ಸಹಜಸ್ಥಿತಿಗೆ ತರಲು ಸಂಪುಟ ಸಭೆಯಲ್ಲಿ ಕೂಡ ನಿರ್ಧಾರ ಕೈಗೊಳ್ಳಲಾಗಿದೆ” ಎಂದರು.
ಟೇಲರ್ ಗಳು, ಡ್ರೈವರ್ ಗಳು, ವಿವಿಧ ಕಾರ್ಖಾನೆಗಳ ಕಾರ್ಮಿಕರು ಸೇರಿದಂತೆ ಅನೇಕರು ಸಚಿವರಿಗೆ ಕರೆ ಮಾಡಿ ತಮ್ಮ ಪ್ರಶ್ನೆಗಳಿಗೆ ಉತ್ತರ ಪಡೆದರು.
ಸಂಪೂರ್ಣ ಪ್ರಶ್ನೋತ್ತರದ ಮಾಹಿತಿ ನಾಳೆಯ ‘ವಿಜಯವಾಣಿ’ಯಲ್ಲಿ ಪ್ರಕಟವಾಗಲಿದೆ.
ಇದನ್ನೂ ಓದಿ:ಲಾಕ್​ಡೌನ್ ನಿಯಮಗಳನ್ನು ಗಾಳಿಗೆ ತೂರಿ ಪುತ್ರನ ವಿವಾಹ ನೆರವೇರಿಸಿದ ಮಾಜಿ ಶಾಸಕ; ಮಾಸ್ಕ್​ ಇರಲಿಲ್ಲ, ಸಾಮಾಜಿಕ ಅಂತರ ಪಾಲನೆಯಾಗಿಲ್ಲ…!
ಮೇ 1ರ ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಅದರ ಮುನ್ನಾ ದಿನ ಈ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
https://www.facebook.com/VVani4U/videos/232161054782407/
ಮಾಸ್ಕ್​ ಧರಿಸದಿದ್ದರೆ ನೇರ ಜೈಲಿಗೆ, ಜತೆಗೆ ಭಾರಿ ದಂಡ! ಬಂದಿದೆ ಹೊಸ ನಿಯಮ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 13 =
Remember me
