ಬೆಂಗಳೂರು:ಗುಂಪು ಘರ್ಷಣೆ, ರೌಡಿಸಂ ಹೇಳಿ ಕೇಳಿ ಮಾಡುವುದಿಲ್ಲ. ಇದ್ದಕ್ಕಿದ್ದ ಹಾಗೆ ಮಾಡುತ್ತಾರೆ. ಅಂಥ ಸಂದರ್ಭದಲ್ಲಿ ಅದನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ. ಏನು ಬೇಕಾದರೂ ಮಾಡಬಹುದು ಎಂದು ತಿಳಿದುಕೊಂಡವರನ್ನು ಬಿಡುವುದಿಲ್ಲ. ಪೊಲೀಸ್ ಠಾಣೆಗೇ ಬಂದು ಧಮಕಿ ಹಾಕುವವರನ್ನು ಸುಮ್ಮನೆ ಬಿಡೋಕಾಗುತ್ತದೆಯೆ ? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೇಳಿದರು.
ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ದೂರಿನ ವಿಚಾರಣೆಗೆ ಆದಿಲ್ ಎಂಬ ವ್ಯಕ್ತಿಯನ್ನು ಚನ್ನಗಿರಿ ಠಾಣೆ ಪೊಲೀಸರು ಕರೆ ತಂದ ಏಳು ನಿಮಿಷಗಳಲ್ಲಿ ಆರೋಗ್ಯದಲ್ಲಿ ಏನೋ ಏರುಪೇರಾಗಿ ಮೃತಪಟ್ಟಿದ್ದಾನೆ. ಲಾಕಪ್ ಡೆತ್ ಆಗಿದೆ ಎಂದು ಆರೋಪಿಸಲಾಗುತ್ತಿದ್ದು, ಶವದ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳಲಾಗುತ್ತದೆ.
ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂದು ಭಾವಿಸಿದ ಕೋಪೋದ್ರಿಕ್ತ ಜನರು ಪ್ರತಿಭಟನೆ ನಡೆಸಿ, ಠಾಣೆಗೂ ನುಗ್ಗುವ ಪ್ರಯತ್ನ ಮಾಡಿದ್ದಾರೆ. ಪೊಲೀಸರು ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಕಲ್ಲು ತೂರಾಟದಲ್ಲಿ ಪೊಲೀಸರಿಗೂ ಗಾಯಗಳಾಗಿವೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ರೀತಿ ಗಲಾಟೆ ಮಾಡುತ್ತಾರೆ ಎಂಬ ವಿಷಯ ನನ್ನ ಕಿವಿಗೂ ಬಿದ್ದಿದೆ. ಅಂತಹವರನ್ನು ಮುಲಾಜಿಲ್ಲದೆ ಮಟ್ಟಹಾಕುತ್ತೇವೆ. ಪೊಲೀಸ್ ಠಾಣೆಗೇ ಬಂದು ಪೊಲೀಸರ ತಲೆ ಕಡೀತೀವಿ ಅನ್ನೋರನ್ನು ಬಿಡೋಕಾಗುತ್ತಾ ? ಅಂತಹವರ ಮೇಲೆ ಪೊಲೀಸರು ಕಾನೂನು ಪ್ರಕಾರ ಕ್ರಮವಹಿಸುತ್ತಾರೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.
ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಪೊಲೀಸರು ಕಾನೂನು ಕ್ರಮವಹಿಸಿದ್ದಾರೆ. ಬಂಧಿಸಿ, ಠಾಣೆಯಲ್ಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಈ ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಬರಲಿದ್ದು, ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸುತ್ತಾರೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
