ಬೆಂಗಳೂರು: ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮೈ ಬಣ್ಣದ ಬಗ್ಗೆ ಮಾತನಾಡಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಕೃತಿ ದಹನ ಮಾಡಿದರು.ಮಾಜಿ ಗೃಹ ಸಚಿವರ ತಮ್ಮ ಭಾಷಣದಲ್ಲಿ ಆ ಭಾಗದಲ್ಲಿ ಅರಣ್ಯ ಪ್ರದೇಶ ಇಲ್ಲ ಆದ್ದರಿಂದ ಮಲ್ಲಿಕಾರ್ಜುನ ಖರ್ಗೆಯವರು ಕಪ್ಪಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ, ರಾಷ್ಟ್ರಮಟ್ಟದ ನಾಯಕರ ಬಗ್ಗೆ ಮಾತನಾಡುವಾಗ ಅವರ ವ್ಯಕ್ತಿತ್ವವನ್ನು ಅರಿತು ಮಾತನಾಡುವ ಸೌಜನ್ಯವೂ ಇಲ್ಲದ ಒಬ್ಬ ಮಾಜಿ ಗೃಹ ಸಚಿವ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಟೀಕಿಸಿದರು.ಒಬ್ಬ ದಲಿತ ನಾಯಕರ ಹೆಸರನ್ನು ಪ್ರಸ್ತಾಪಿಸುವಾಗ ಪರಿಜ್ಞಾನವಿಲ್ಲದೆ ಮಾತನಾಡಿರುವ ಆರಗ ಜ್ಞಾನೇಂದ್ರರನ್ನು ಬಿಜೆಪಿ ಇನ್ನು ವಜಾಗೊಳಿಸಿದೆ ಇರುವುದು ಆಶ್ಚರ್ಯವನ್ನು ತರುತ್ತದೆ ಎಂದು ಅವರು ಹೇಳಿದರು.ಮುಖಂಡರಾದ ಎ.ಆನಂದ್, ಜಿ.ಜನಾರ್ಧನ್, ಪ್ರಕಾಶ್, ಪರಿಸರ ರಾಮಕೃಷ್ಣ, ಜಿ.ಮೋಹನ್, ಓಬಳೇಶ್, ಚಿನ್ನಿ ಪ್ರಕಾಶ್, ಹೇಮಣ್ಣ, ಚಂದ್ರಶೇಖರ್, ಪುಟ್ಟರಾಜು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen − 4 =
Remember me
