ಬೆಂಗಳೂರು:ಅರ್ಕಾವತಿ ಬಡಾವಣೆಯ ವಿವಾದದ ತನಿಖೆ ನಡೆಸಿದ ನ್ಯಾ.ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಅರ್ಕಾವತಿ ಬಡಾವಣೆಯ 852 ಎಕರೆ ‘ರೀ ಡು’ ಅಥವಾ ಡಿನೋಟಿಫಿಕೇಷನ್ ಪ್ರಕರಣವು ಎಂಟು ಸಾವಿರ ಕೋಟಿ ರೂ. ಮೌಲ್ಯದ್ದು ಎಂದು ಅಂದಾಜಿಸಲಾಗಿದೆ. 2014ರಲ್ಲಿ ಸಿಎಂ ಆಗಿದ್ದ ಈಗಲೂ ಸಿಎಂ ಆಗಿರುವ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಭುಗಿಲೆದ್ದ ವಿವಾದವಿದು.
ರೀ ಡು ಹಗರಣದ ನೈಜತೆ ತಿಳಿದು ವರದಿ ಸಲ್ಲಿಸಲು ಎಂದು ಸ್ವತಃ ಸಿದ್ದರಾಮಯ್ಯ ಅವರೇ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚಿಸಿ, ವಿಚಾರಣೆಗೆ ಆದೇಶಿಸಿದ್ದರು.
ಈ ಆಯೋಗ ವಿಚಾರಣೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿಯಾಗಿದೆ. ಭ್ರಷ್ಟಾಚಾರದ ವಿರೋಧಿಯಾಗಿರುವ ಸಿಎಂ ಸಿದ್ದರಾಮಯ್ಯ, ನ್ಯಾ.ಕೆಂಪಣ್ಣ ವರದಿಯನ್ನು ಜನರ ಮುಂದಿಟ್ಟು ತಾವೇ ಹೇಳಿಕೊಳ್ಳುವಂತೆ ನಿಷ್ಕಳಂಕರು ಎಂಬುದನ್ನು ಸಾಬೀತುಪಡಿಸಬೇಕು ಎಂದು ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
