ಬೆಂಗಳೂರು:ರಾಜಧಾನಿ ಬೆಂಗಳೂರಿನ ಕುಂದಲಹಳ್ಳಿ ಗೇಟ್ ಸಮೀಪದ ಬೇಕರಿಯೊಂದರ ಹುಡುಗರಿಗೆ ಪುಡಿರೌಡಿಗಳಿಗೆ ಮನಸೋಇಚ್ಛೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದರೂ, ಇನ್ನಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿಲ್ಲ ಎಂದಿರುವ ಕರಾವಳಿಗರು ಎಲ್ಲ ಆರೋಪಿಗಳನ್ನೂ ವಶಕ್ಕೆ ಪಡೆಯುವಂತೆ ಒತ್ತಾಯಿಸಿದ್ದಾರೆ.
ಸಿಗರೇಟ್ ಹಣ ಕೇಳಿದಕ್ಕೆ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.9 ಲಕ್ಷ ರೂ. ಎಗರಿಸಿ, ಪ್ರಾಣಬೆದರಿಕೆ ಹಾಕಿರುವ ಪ್ರಕರಣ ಕುಂದಲಹಳ್ಳಿಗೇಟ್ ಸಮೀಪದ ಕಾಂಡಿಮೆಂಟ್ಸ್‌ವೊಂದರಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ಕಾರ್ತಿಕ್ (20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್ (20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್ (23) ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಆದರೆ ಈ ಪ್ರಕರಣದಲ್ಲಿ ಇನ್ನಿಬ್ಬರಿದ್ದು ಅವರನ್ನೂ ಬಂಧಿಸಬೇಕು ಎಂದು ಕರಾವಳಿಗರು ಪೊಲೀಸರನ್ನು ಆಗ್ರಹಿಸಿದ್ದಾರೆ. ಬೇಕರಿ ಹುಡುಗರ ಮೇಲೆ ಹಲ್ಲೆ ನಡೆಸಿದ ಎಲ್ಲ ಆರೋಪಿಗಳ ಬಂಧನ ಆಗಲೇ ಬೇಕು. ಹಲ್ಲೆಯ ಹಿಂದೆ ಇನ್ನೊಂದು ಬೇಕರಿ ಮಾಲೀಕ ಮಂಜುನಾಥ ಎಂಬಾತ ಸುಪಾರಿ ಕೊಟ್ಟಿದ್ದಾನೆ. ಮಾತ್ರವಲ್ಲ ಈತ ಪೊಲೀಸರಿಗೆ ಮಾಮೂಲಿ ಕೊಡುತ್ತಿದ್ದ ಎನ್ನಲಾಗಿದೆ. ಮಾತ್ರವಲ್ಲದೆ ಬೇಕರಿಯಲ್ಲಿ ಗಲಾಟೆ ಆದ ತಕ್ಷಣವೇ ಹುಡುಗರು ಹೊಯ್ಸಳ ಪೊಲೀಸರಿಗೆ ದೂರವಾಣಿ ಮೂಲಕ ಘಟನೆಯನ್ನ ವಿವರಿಸಿದ್ದರೂ ನಮ್ಮ ಲಿಮಿಟ್ಸ್ ಅಲ್ಲ ಎಂದಿದ್ದಾರೆ. ಮತ್ತೊಂದೆಡೆ ಆರೋಪಿಗಳನ್ನು ಸ್ಥಳೀಐ ರಾಜಕಾರಣಿಗಳು ರಕ್ಷಿಸುತ್ತಿರುವ ಸುಳಿವು ಸಿಕ್ಕಿದೆ. ಗೃಹ ಸಚಿವರು ನ್ಯಾಯ ಸಿಗದೇ ಹೋದರೆ ನಾವು ಮತ್ತೆ ಪ್ರತಿಭಟನೆ ನಡೆಸುವುದು ಅನಿವಾರ್ಯ. ಇದು ಒಂದು ದಿನದ ಶೋ ಅಲ್ಲ, ನ್ಯಾಯ ಸಿಗುವವರೆಗೂ ಮುಂದುವರಿಯಲಿದೆ ಎಂದು ಜೈ ಭಾರ್ಗವ ಬಳಗ ಹಾಗೂ ಇತರ ಕರಾವಳಿಗರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಅಂಗಡಿ ಹುಡುಗರ ಮೇಲೆ ಹಲ್ಲೆ ಮಾಡಿ 1.90 ಲಕ್ಷ ರೂ. ದೋಚಿದ್ದ ಪುಡಿ ರೌಡಿಗಳ ಬಂಧನ
ಇನ್ನೊಂದೆಡೆ ಬೆಂಗಳೂರು ಪೊಲೀಸರ ಅಧಿಕೃತ ಫೇಸ್​ಬುಕ್ ಖಾತೆಯಲ್ಲಿ ಈ ಹಲ್ಲೆ ಸಂಬಂಧಿಸಿದ ವಿಡಿಯೋ ದೃಶ್ಯದ ಫೋಟೋ ಪ್ರಕಟಿಸಲಾಗಿದ್ದು, ಅದರಲ್ಲಿ ಆರೋಪಿಗಳ ಮುಖವನ್ನು ಮರೆ ಮಾಚಿರುವುದರ ವಿರುದ್ಧವೂ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪುತ್ರನಿಂದಲೇ ಕೊಲೆಯಾದ ಹಿರಿಯ ನಟಿ; ಬ್ಯಾಟ್​ನಿಂದ ಹೊಡೆದು ಕೊಂದು ಶವ ನದಿಗೆಸೆದ ಮಗ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 10 =
Remember me
