ಬೆಂಗಳೂರು:ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ರಾಷ್ಟ್ರಗೀತೆಗೆ ತಮಿಳುನಾಡು ಸರ್ಕಾರ ವಿರೋಧ: ಭಾಷಣ ತಿರಸ್ಕರಿಸಿ ಹೊರ ನಡೆದ ರಾಜ್ಯಪಾಲ ರವಿ
ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ ಎಂದು ಆಗ್ರಹಿಸಿದ್ದಾರೆ.
ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ ಎಂದಿದ್ದಾರೆ.
ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ರಾಜ್ಯ ಬಿಜೆಪಿ ಸರ್ಕಾರ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು ಎಂದು ಕಿಡಿಕಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಮುಖ್ಯಮಂತ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮಲಲ್ಲಾ ದರ್ಶನ ಪಡೆಯಲಿದ್ದಾರೆ ಸಿಎಂ ಅರವಿಂದ್ ಕ್ರೇಜಿವಾಲ್, ಭಗವಂತ್ ಮಾನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + eighteen =
Remember me
