ಬೆಂಗಳೂರು:ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಣದ ಮಾಡಿದ್ದ ಆರೋಪದಡಿ ಜೆಡಿಎಸ್​ ಶಾಸಕ ಎಚ್​.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ ಹಿನ್ನೆಲೆಯಲ್ಲಿ ಸಿಐಡಿ ಕಚೇರಿ ಮುಂಭಾಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್​​ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಹೆಚ್​ಡಿ ರೇವಣ್ಣ ಬಂಧನ!
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ನಿವಾಸದಿಂದ ರೇವಣ್ಣ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ನಗರದ ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿ ಕಾರ್ಲಟನ್‌ ಭವನಕ್ಕೆ ಕರೆದೊಯ್ದರು.  ಇಲ್ಲಿರುವ ಸಿಐಡಿ ಕಚೇರಿಯಲ್ಲೇ ಎಸ್ಐಟಿ ಕಚೇರಿ ಇದೆ. ಭವನದ ಸುತ್ತಮುತ್ತ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಸಿಐಡಿ ಕಚೇರಿ ಮುಂಭಾಗದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶೇಷಾದ್ರಿಪುರಂ ಎಸಿಪಿ ಪ್ರಕಾಶ್, ಹೈಗ್ರೌಂಡ್ಸ್ ಇನ್​​ಸ್ಪೆಕ್ಟರ್ ಭರತ್ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದೆ.

ಆರೋಪಿಯನ್ನು ಕಚೇರಿಯಿಂದ ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕರೆದೊಯ್ಯಬೇಕು. ಇದಾದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಯನ್ನು ಎಸ್​ಐಟಿ ಅಧಿಕಾರಿಗಳು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಲವ್ಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + sixteen =
Remember me
